Kannada News Now

1.8M Followers

BIGG NEWS : ಗಮನಿಸಿ ; ರಾಜ್ಯದಲ್ಲಿ ನಾಳೆಯಿಂದ ಏ.10 ರವರೆಗೆ 'ಮಳೆ' ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

05 Apr 2021.7:56 PM

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, , ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಿದೆ.

ಇನ್ನೂ, ಏಪ್ರಿಲ್ 10 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳ ಮೆಡಿಕಲ್ ಸ್ಟೂಡೆಂಟ್ಸ್ ನ ಈ ವೀಡಿಯೊ ವೈರಲ್ ಆಗಿದೆ ನೋಡಿ

ಚುನಾವಣಾ ಆಯೋಗ ಒಪ್ಪಿದ್ರೆ ಸಂಬಳ ಜಾಸ್ತಿ ಮಾಡ್ತೇವೆ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags