ಬಿಸಿ ಸುದ್ದಿ

169k Followers

ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ: ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್

06 Apr 2021.1:16 PM

ಬೆಂಗಳೂರು: ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ. 6ನೇ ವೇತನ ಆಯೋಗದಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ನೌಕರರನ್ನು ಮನವೊಲಿಕೆಗೆ ಪ್ರಯತ್ನ ಇಲ್ಲ. ನಾವು ಪರ್ಯಾಯ ಮಾರ್ಗ ಅನುಸರಿಸುತ್ತೇವೆ. ಪ್ರತಿಭಟನೆ ಮಾಡುವವರ ವಿಷಯದಲ್ಲಿ ಕಾನೂನೂ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನಾಳೆ (ಎ.7) ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರಿಗೆ ಬಸ್ ಗಳನ್ನು ಹಾನಿಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಅವು ಸಾರ್ವಜನಿಕ ಸೊತ್ತು. ಅವುಗಳಿಗೆ ಹಾನಿಯಾದರೆ ಕ್ರಮ ಕೈಗೊಳ್ಳುತ್ತೇವೆ. ಮುಷ್ಕರ ನಿರತರ ನೌಕರರು ಕೆಲಸಕ್ಕೆ ಹಾಜರಾಗದಿದ್ದರೇ ವೇತನ ಕಡಿತಗೊಳಿಸಲಾಗುವ ನಿಯಮ ಕೂಡ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು, ಜನರಲ್ಲಿ ಉದಾಸೀನ ಹೆಚ್ಚಾಗಿದೆ : ಸಚಿವ ಸುಧಾಕರ್

Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags