TV9 ಕನ್ನಡ

371k Followers

Karnataka Transport Workers Strike: ಸಾರಿಗೆ ನೌಕರರ ಮುಷ್ಕರದ ಈ ದಿನ ಏನೇನಾಯ್ತು?‌

07 Apr 2021.06:49 AM

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯುತ್ತೆ. ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರಿಯುತ್ತೆ. ಮುಷ್ಕರದ ವೇಳೆ ಕೊರೊನಾ ನಿಯಮ ಸಹ ಉಲ್ಲಂಘಿಸಿಲ್ಲ. ಇದೇ ರೀತಿ, ನಾಳೆಯೂ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸಲಾಗುತ್ತೆ ಎಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಕೊರೊನಾ ಆರ್ಥಿಕ ಸಂಕಷ್ಟ ಎಂದು ರಾಜ್ಯ ಸರ್ಕಾರ ಹೇಳುತ್ತೆ. ಕೊರೊನಾ ನಡುವೆಯೂ ಮಠ, ಮಂದಿರಕ್ಕೆ ಹಣ ನೀಡಿಲ್ಲವೇ? ಅರ್ಧ ಸಂಬಳ ನೀಡಿ ಕೆಲಸ ಮಾಡಿಸಿಕೊಳ್ಳುವುದು ಸರಿಯೇ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ನಾಲ್ಕು ನಿಗಮದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ.

ಏತನ್ಮಧ್ಯೆ ಮುಷ್ಕರಕ್ಕಿಳಿದಿರುವ ನೌಕರರಿಗೆ ಮಾರ್ಚ್​ ತಿಂಗಳದ ವೇತನ ಇನ್ನೂ ಸಿಕ್ಕಿಲ್ಲವಾದ್ದರಿಂದ ಸರ್ಕಾರ ಆಟ ಆಡಿಸಬಹುದು ಎಂಬ ಭಯವೂ ಇದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಂಬಳವನ್ನೇ ಅಸ್ತ್ರವನ್ನಾಗಿಸಿಕೊಳ್ಳಬಹುದೆಂದು ಸ್ವತಃ ಸಾರಿಗೆ ಸಿಬ್ಬಂದಿಗಳೇ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದಕ್ಕೆಲ್ಲಾ ತೆರೆ ಎಳೆದಿರುವ ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ, ವೇತನ ತಡೆ ವಿಚಾರ ನಮ್ಮ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ದಿನ ಏನೇನಾಯ್ತು? ಬೆಳಗ್ಗಿನಿಂದ ಇಲ್ಲಿಯವರೆಗಿನ ಘಟನಾವಳಿಗಳ ವಿವರಗಳು ಇಲ್ಲಿದೆ.

The post Karnataka Transport Workers Strike: ಸಾರಿಗೆ ನೌಕರರ ಮುಷ್ಕರದ ಈ ದಿನ ಏನೇನಾಯ್ತು?‌ appeared first on TV9 Kannada.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags