Kannada News Now

1.8M Followers

ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : 'ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ' : ಸಾರ್ವಜನಿಕ ಶಿಕ್ಷಣ ಇಲಾಖೆ

07 Apr 2021.06:02 AM

ಬೆಂಗಳೂರು : 6 ನೇ ವೇತನ ಆಯೋಗ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

BIG NEWS : ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯದಲ್ಲಿ ಬಸ್ ಸಂಚಾರ ಬಂದ್

ಈ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಮೂಲಕ ಬೋಧನೆ ಮಾಡಲಾಗುತ್ತದೆ., ಮುಂದಿನ ಪರಿಸ್ಥಿತಿಯನ್ನು ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `ಭಾರತೀಯ ವಾಯುಪಡೆ'ಯಲ್ಲಿ 1524 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು, ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯವಲ್ಲವೆಂದು ಶಿಕ್ಷಣ ಇಲಾಖೆಯಿಂದ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಭೌತಿಕ ತರಗತಿಗಳಿಗೆ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎನ್ನಲಾಗಿದೆ. ಸಾರಿಗೆ ವ್ಯವಸ್ಥೆ ಸರಿಯಾಗುವವರೆಗೆ ಆನ್ ಲೈನ್ ಅಥವಾ ಪರ್ಯಾಯ ಮಾರ್ಗಗಳ ಮೂಲಕ ಬೋಧನೆ ಮಾಡುವಂತೆ ತಿಳಿಸಲಾಗಿದೆ.

ಇನ್ನೂ, ಇಂದು ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಸರ್ಕಾರ ಏನು ಬೇಕೋ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಖಾಸಗಿ ಬಸ್‌ʼಗಳು ರೈಲು ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. 'ಹಠ ಮಾಡದೇ ಸಾರಿಗೆ ನೌಕರರು ಮುಷ್ಕರ ಹಿಂಪಡೆಯಬೇಕು. ನಿಮ್ಮ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನ ಈಡೇರಿಸಿದ್ದೇವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ನೀಡಬೇಡಿ. ಮುಷ್ಕರ ಕೈಬಿಟ್ಟು ಸರ್ಕಾರಕ್ಕೆ ಸಹಕಾರ ನೀಡಬೇಕು' ಎಂದಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags