Kannada News Now

1.8M Followers

BIG BREAKING NEWS : 'ಖಾಸಗಿ ಬಸ್ ಮಾಲೀಕ'ರಿಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 'ಪುಲ್ ಪರ್ಮಿಟ್' ನೀಡಿ ಆದೇಶ

07 Apr 2021.1:20 PM

ಬೆಂಗಳೂರು : ಸಾರಿಗೆ ಸಂಸ್ಥಗಳ ನೌಕರರು ದಿನಾಂಕ 07-04-2021ರ ಇಂದಿನಿಂದ ಅನಿರ್ಧಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಖಾಸಗಿ ಬಸ್ ಗಳಿಗೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಶಿವಮೊಗ್ಗ : ಸಾಗರದಲ್ಲೂ ಪ್ರಯಾಣಿಕರಿಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ : KSRTC ಬಸ್ ನಿಲ್ದಾಣದಲ್ಲಿ ಖಾಸಗೀ ಬಸ್ಸುಗಳು

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾದರ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅಧಿಸೂಚನೆ ಹೊರಡಿಸಿದ್ದು, ಸಾರಿಗೆ ಸಂಸ್ಥೆಗಳ ನೌಕರರು ದಿನಾಂಕ 07-04-2021ರಿಂದ ಅನಿರ್ಧಿಷ್ಟ ಕಾಲ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆಯನ್ನು ಖಾಸಗಿ ಪ್ರಯಾಣಿಕರ ವಾಹನಗಳ ಮುಖಾಂತರ ಕಲ್ಪಿಸಲುವ ಸಂಬಂಧ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗಿದೆ.

ಇದರಿಂದಾಗಿ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(3)(ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮುಷ್ಕರದ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(1)ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

ಈ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags