Kannada News Now

1.8M Followers

BIG BREAKING NEWS : ಮುಷ್ಕರ ನಿರತ 'ಸಾರಿಗೆ ನೌಕರ'ರಿಗೆ ಮತ್ತೊಂದು ಬಿಗ್ ಶಾಕ್ : 'ನಿವೃತ್ತ ಚಾಲಕ, ನಿರ್ವಾಹಕ'ರನ್ನು 'ತಾತ್ಕಾಲಿಕ ಒಪ್ಪಂದ'ದ ಮೇಲೆ ನಿಯೋಜನಗೆ 'ರಾಜ್ಯ ಸರ್ಕಾರ' ಆದೇಶ

09 Apr 2021.05:30 AM

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜನೆಗೊಳಿಸಿಕೊಂಡು, ಸಾರಿಗೆ ಬಸ್ ಸಂಚಾರಕ್ಕೆ ಅಧಿಸೂಚನೆ ಹೊರಡಿಸಿದೆ.

KPSC ಸದಸ್ಯರಾಗಿ 'ಡಾ.ಬಿ.ಪ್ರಭುದೇವ್' ನೇಮಕ

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದಂತ ಶಿವಯೋಗಿ ಸಿ ಕಳಸದ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ, ಕಳೆದ 2 ವರ್ಷಗಳಲ್ಲಿ ನಿವೃತ್ತಿ ಹೊಂದಿ 62 ವರ್ಷ ವಯೋಮಿತಿ ಮೀರದ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸಲು ಉದ್ದೇಶಿಸಲಾಗಿರುತ್ತದೆ.

BIG BREAKING : ರಾಜ್ಯ ಸರ್ಕಾರದಿಂದ 'ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ಅಧಿನಿಯಮ' ತಿದ್ದಪಡಿ ಗೆಜೆಟ್ ಅಧಿಸೂಚನೆ ಪ್ರಕಟ : 'ಕಾಮಗಾರಿಗಳ ಗುತ್ತಿ'ಗೆ ಪದ್ದತಿಯಲ್ಲಿ ಮಹತ್ವದ ಬದಲಾವಣೆ

ನಿವೃತ್ತ ನೌಕರರನ್ನು ಅವರು ನಿವೃತ್ತಿ ಹೊಂದಿದ ವಿಭಾಗದ ಅಥವಾ ವಾಸಸ್ಥಳಕ್ಕೆ ಹತ್ತಿರದ ವಿಭಾಗಗಳಲ್ಲಿ ನಿಯೋಜಿಸಲಾಗುವುದು. ಈ ಕೆಳಕಂಡ ಷರತ್ತುಗಳನ್ನು ಒಪ್ಪಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ನಿವೃತ್ತ ಚಾಲನಾ ಸಿಬ್ಬಂದಿಗಳು ತಾವು ನಿವೃತ್ತಿ ಹೊಂದಿದ ವಿಭಾಗದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags