ಬೆಂಗಳೂರು: ಕೋವಿಡ್ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರದಂದು ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು; ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಯಥಾವತ್ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ಶೈಕ್ಷಣಿಕ ವರ್ಷ ನಿಲ್ಲದು:
ಮುಂದಿನ ವರ್ಷ, ಅಂದರೆ; 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ.
ಯಾರು ಕಾಲೇಜಿಗೆ ಬರುತ್ತಾರೋ ಅವರ ಸುರಕ್ಷತೆಗೆ ಕಾಲೇಜಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ವ್ಯವಸ್ಥೆ ಮಾಡಲಾಗಿರುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್, ಸ್ವಚ್ಛತೆ, ಕೋವಿಡ್ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ನಷ್ಟವಾಗಿದೆ. ಅಂದರೆ, ತಡವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದು ವೇಳೆ ತಡವಾದರೆ, ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಚೈನ್ ಕಟ್ ಆಗಿಬಿಡುತ್ತದೆ. ಹಾಗೆ ಆಗುವುದು ಬೇಡ ಎಂದು ಹೇಳಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia