Oneindia

1.1M Followers

ಬಿಸಿಲಿನ ತಾಪ: ರಾಜ್ಯದ ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬದಲು!

12 Apr 2021.2:30 PM

ಬೆಂಗಳೂರು, ಏಪ್ರಿಲ್ 11: ಕರ್ನಾಟಕದಲ್ಲಿ ಬಿಸಿಲಿನ ತಾಪಕ್ಕೆ ಜನರು ಮನೆಗಳಿಂದ ಹೊರ ಬಾರದಂಥ ಸ್ಥಿತಿ ನಿರ್ಮಾಣವಾಗಿದೆ. ರಣ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ನೌಕರರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ.

ಏಪ್ರಿಲ್ 12ರಿಂದ ಹೊಸ ವೇಳಾಪಟ್ಟಿಯಂತೆ ಸರ್ಕಾರಿ ಕಚೇರಿಗಳು ಕಾರ್ಯಾರಂಭ ಮಾಡಲಿವೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೂ ಸರ್ಕಾರಿ ಕಚೇರಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ತಾಪಮಾನ: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು ಜೋರು?

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲಸ ಅವಧಿಯನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು.

ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ವಿಭಾಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಿದೆ.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ:

ಉತ್ತರ ಕರ್ನಾಟಕದಲ್ಲಿ ಗುರುತಿಸಿದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಕಾರ್ಯ ನಿರ್ವಹಿಸಲಿವೆ. ನಿಗದಿತ ಜಿಲ್ಲೆಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30ರವರೆಗೂ ತೆರೆದಿರುತ್ತವೆ. ಈ ಅವಧಿಯಲ್ಲೇ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಲು ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Kumba Mela 2021 : ಎಷ್ಟು ಹೇಳಿದ್ರು ಜನ ಬುದ್ದಿ ಕಲಿತಿಲ್ಲ! | Oneindia Kannada

ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳಿಂದ ಕೊವಿಡ್-19 ತುರ್ತು ಕಾರ್ಯಕ್ಕಾಗಿ ನೇಮಕಗೊಂಡ ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.

source: oneindia.com

Disclaimer

Disclaimer

This story is auto-aggregated by a computer program and has not been created or edited by Dailyhunt Publisher: OneIndia Kannada

#Hashtags