News18 ಕನ್ನಡ

398k Followers

Teachers Recruitment - ಖಾಲಿ ಇರುವ 430 ಶಿಕ್ಷಕ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ

28 Feb 2021.09:56 AM

ಬೆಂಗಳೂರು(ಫೆ. 28): ಐದು ವರ್ಷಗಳ ಮುಂಚೆ ಖಾಲಿ ಆದ ಶಿಕ್ಷಕರ ಹುದ್ದೆಗಳು ಭರ್ತಿಯಾಗಲಿವೆ. 2015, ಡಿಸೆಂಬರ್ 31ರ ಅಂತ್ಯಕ್ಕೆ ನಿವೃತ್ತಿಯಾಗಿ ಅಥವಾ ಮರಣವಪ್ಪಿ ಅಥವಾ ರಾಜೀನಾಮೆ ನೀಡಿದ ಕಾರಣಕ್ಕೆ ಒಟ್ಟು 430 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಜೂನ್ ಅಥವಾ ಜುಲೈ ತಿಂಗಳಲ್ಲಿ ಈ 430 ಹುದ್ದೆಗಳ ನೇಮಕಾತಿ ಆದೇಶವನ್ನು ನೀಡಲು ಆರ್ಥಿಕ ಇಲಾಖೆ ಸಮ್ಮತಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ 173 ಬೋಧಕ ಹುದ್ದೆ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿನ 257 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. ಅದರೆ, ಆರ್ಥಿಕ ಇಲಾಖೆಯ ಅನುಮೋದನೆಯಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಆರ್ಥಿಕ ಇಲಾಖೆ ಕೂಡ ಈ ನೇಮಕಾತಿಗೆ ಒಪ್ಪಿಗೆಯ ಮುದ್ರೆ ಒತ್ತಿದೆ. ಮೈಸೂರು ಮೇಯರ್ ಚುನಾವಣೆಯಲ್ಲಿ ನಡೆದಿದ್ದೇನು? ಸೋಮವಾರ ಸಮಗ್ರ ವರದಿ ಸಲ್ಲಿಕೆ: ಧ್ರುವನಾರಾಯಣ

ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸುಗಮಗೊಳಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿತ್ತು. ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಿ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ಹೇಳಿದ್ದಾರೆ.
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags