Zee News ಕನ್ನಡ

351k Followers

Ashwath Narayan: 'ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಎಕ್ಸಾಮ್ ಸಾಧ್ಯವಿಲ್ಲ'

14 Apr 2021.04:00 AM

ಬೆಂಗಳೂರು: ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಸಾಧ್ಯವಿಲ್ಲ ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾರಾಯಣ್(Ashwath Narayan), ಸರ್ಕಾರ ನಡೆಸುವ ಸಂಸ್ಥೆಗಳಲ್ಲಿ ಆನ್‌ಲೈನ್ ವಿಧಾನ ಪರೀಕ್ಷೆಗಳು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ- BS Yediyurappa: 'ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಲಾಕ್‌ಡೌನ್ ಇಲ್ಲ'

ಆನ್‌ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಬೇಡಿಕೆ ಇದೆ.

ಆದರೆ ಮೂಲಸೌಕರ್ಯಗಳ ಕೊರತೆಯಿಂದ ಆನ್‌ಲೈನ್ ಪರೀಕ್ಷೆ(Online Exams)ಗಳನ್ನು ನಡೆಸಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ- Govt Office Timings Change: ಉತ್ತರ ಕರ್ನಾಟಕದ 9 ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಸಮಯ ಬದಲಾವಣೆ!

ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುವುದು ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯ(Private Universities)ಗಳಲ್ಲಿ ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿದೆ, ಆದರೆ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ಇದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ- Bus Strike: 6 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಕುಟುಂಬ ಸಮೇತ ಬೀದಿಗಿಳಿದ ಸಿಬ್ಬಂದಿ!

ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಮುಷ್ಕರ(Bus Strike)ದಿಂದಾಗಿ ಪರೀಕ್ಷೆಯ ವೇಳಾಪಟ್ಟಿಯ ಮೇಲೆ ಬೀರುವ ಪರಿಣಾಮ ಕುರಿತು ಮಾತನಾಡಿದ ಅವರು, ಸಾರಿಗೆ ನೌಕರರ ಮುಷ್ಕರದಿಂದಾಗಿ ಪದವಿ, ಪಿಜಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಪರೀಕ್ಷೆಗಳ ಟೈಮ್ ಟೇಬಲ್ ಡ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಅವುಗಳನ್ನ ಸಧ್ಯ ಮುಂದೋಡಲಾಗಿದೆ. ಮುಷ್ಕರ ಮುಗಿದ ಕೂಡಲೇ ಪರೀಕ್ಷೆಗಳ ದಿನಾಂಕ ಘೋಷಿಸಿ, ನಡೆಸಲಾಗುವುದು ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Zee News Kannada

#Hashtags