ಉದಯವಾಣಿ

1.4M Followers

ಸಿಬಿಎಸ್‌ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

14 Apr 2021.4:03 PM

ಬೆಂಗಳೂರು: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಕೇಂದ್ರ ಸರ್ಕಾರ ಸಿಬಿಎಸ್‌ಇ ಯ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿದೆ. ಇದರೊಂದಿಗೆ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

breaking news : CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Udayavani

#Hashtags