Kannada News Now

1.8M Followers

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 402 `PSI' ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

04 May 2021.07:14 AM

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ. 20 ರವರೆಗೆ ವಿಸ್ತರಿಸಲಾಗಿದೆ.

  • ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021
  • ಆನ್‌ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 20/05/2021
  • ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 24/05/2021

ವಯೋಮಿತಿ ಅರ್ಹತೆಗಳು

  • ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
  • ಎಸ್‌ಸಿ / ಎಸ್‌ಟಿ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.500, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್‌ ಶಾಖೆಗಳ / ಅಂಚೆ ಕಛೇರಿಯ ವೇಳೆ ಪಾವತಿಸಬೇಕು.

ಇತರೆ ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್‌ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ : https://psicivil21.ksp-online.in/ ಗೆ ಭೇಟಿ ನೀಡಿ.

ವಿದ್ಯಾರ್ಹತೆ: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 20.05.2021 ಕ್ಕೆ ಹೊಂದಿರಬೇಕು. ಸೇವಾನಿರತ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮತ್ತು ಅನುಭವ : ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ 5ವರ್ಷಗಳ ಕನಿಷ್ಟ ಸೇವೆಯನ್ನು ಸಹಾಯಕ ಪೊಲೀಸ್ ಸಬ್‌ಇನ್ಸ್ಪೆಕ್ಟರ್ / ಹೆಡ್ ಕಾನ್ಸ್ಟೇಬಲ್ / ಪೊಲೀಸ್ ಕಾನ್ಸ್ಟೇಬಲ್ ಆಗಿ ಪೂರ್ಣಗೊಳಿಸಿರಬೇಕು ಹಾಗೂ ಹಾಲಿ ಪೊಲೀಸ್ ಇಲಾಖೆಯಲ್ಲಿ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರಬೇಕು, (ಸೇವಾನಿರತ ಅಭ್ಯರ್ಥಿಗಳು ಅಧಿಸೂಚನೆಯ ಪುಟ ಸಂಖ್ಯೆ 24 ಮತ್ತು 25 ರಲ್ಲಿರುವ ಅನುಬಂಧ-'ಎ' & 'ಬಿ' ಯನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಅಂದರೆ 20.05.2021 ರೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು).

ಟಿಪ್ಪಣಿ:
(i) ಮೇಲೆ ನಮೂದಿಸಿರುವ ವಿದ್ಯಾರ್ಹತೆ ಹಾಗೂ ಅನುಭವವನ್ನು ಹೊಂದದೇ ಇರುವ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು, ನಂತರ ನಿಗದಿಪಡಿಸಲಾದ ವಿದ್ಯಾರ್ಹತೆ ಮತ್ತು ಅನುಭವವನ್ನು ಹಾಗೂ ಅಂಕಪಟ್ಟಿ ಹೊಂದಿರುವುದಿಲ್ಲವೆAದು ನೇಮಕಾತಿ ಸಮಿತಿಗೆ ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಯಾವುದೇ ಹಂತದಲ್ಲಾದರೂ ರದ್ದುಪಡಿಸಲಾಗುವುದು.
(ii) ಡಿಪ್ಲೊಮಾ ಇತ್ಯಾದಿ ವಿದ್ಯಾರ್ಹತೆಗಳು ಪದವಿಗೆ ಸಮಾನವಾಗುವುದಿಲ್ಲ. ಆದ್ದರಿಂದ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಹುದ್ದೆಗೆ ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಹರಾಗುವುದಿಲ್ಲ.
(iii) ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿತ ವಿದ್ಯಾರ್ಹತೆಯಾದ ಪದವಿಯನ್ನು ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಹಾಗೂ ಅಂಕಪಟ್ಟಿ ಇಲ್ಲದೆ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ. ಮೇಲಿನ ವಿದ್ಯಾರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸಲಾಗುವುದಿಲ್ಲ.

ವಿ,ಸೂ :

ಎ) ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ (ಪರಸ್ಥಳೀಯ) ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಬಿ) ಒಂದು ವೇಳೆ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಯು ಪ್ರಸ್ತುತ ನೇಮಕಾತಿಗೆ ಸಂಬAಧಿಸಿದAತೆ ಮಿಕ್ಕುಳಿದ (ಪರಸ್ಥಳೀಯ) ವೃಂದದ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೇಮಕಾತಿ ಹೊಂದಿದಲ್ಲಿ ಅಂತಹ ಅಭ್ಯರ್ಥಿಯು ಜಾರಿಯಲ್ಲಿರುವ ನಿಯಮದಂತೆ ತನ್ನ ಸೇವಾ ಅವಧಿಯಲ್ಲಿ ಅನುಚ್ಛೇದ 371ಜೆ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅವಕಾಶವಿರುವುದಿಲ್ಲ ಎಂಬುದನ್ನು ಸ್ಪಷ್ಠೀಕರಿಸಲಾಗಿದೆ.
ಸಿ) ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೆ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬAಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ಡಿ) ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ನೇರ ನೇಮಕಾತಿಗಳಲ್ಲಿ 2% ರಷ್ಟು ಹುದ್ದೆಗಳನ್ನು ಮೀಸಲಿರಿಸುವ ಸಂಬAಧ ಕರಡು ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸಲಾಗಿರುತ್ತದೆ. ಆದ್ದರಿಂದ ಮಿಕ್ಕುಳಿದ ವೃಂದದ ಹುದ್ದೆಗಳಲ್ಲಿ 2% ರಂತೆ 08 ಹುದ್ದೆಗಳು ಹಾಗೂ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳಲ್ಲಿ ೦೧ ಹುದ್ದೆಯನ್ನು ಮೀಸಲಿರಿಸಲಾಗಿದ್ದು(ಅಂತಿಮ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಹೊರಡಿಸುವ ಷರತ್ತಿಗೊಳಪಟ್ಟು), ಸದರಿ ಹುದ್ದೆಗಳ ನೇಮಕಾತಿ ಸಲುವಾಗಿ ಪ್ರತ್ಯೇಕವಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗುವುದು.

ಇತರೆ ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್‌ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ : http://psicivil21.ksp-online.in/ ಗೆ ಭೇಟಿ ನೀಡಬಹುದು.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags