Kannada News Now

1.8M Followers

BIG BREAKING NEWS : ಬಿಸಿಸಿಐನಿಂದ 'IPL-2021' ಪಂದ್ಯಾವಳಿ ಮುಂದೂಡಿಕೆ

04 May 2021.1:50 PM

ನವದೆಹಲಿ : ವಿವಿಧ ಆಟಗಾರರಿಗೆ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ, 2021ರ ಐಪಿಎಲ್ ಪಂದ್ಯಾವಳಿಯನ್ನುಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಹಾಗೂ ಆಟಗಾರರಿಗೂ ಕೊರೋನಾ ಸೋಂಕು ತಗುಲುತ್ತಿರೋ ಹಿನ್ನಲೆಯಲ್ಲಿ ಐಪಿಎಲ್ 2021 ಪಂದ್ಯಾವಳಿಯನ್ನುಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅಂದಹಾಗೇ ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 357,229 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,57,229 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ .

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,282,833,ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,449 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,22,408 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 300,732 ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 34, 47,133 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags