ವಿಜಯವಾಣಿ

505k Followers

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಎಕ್ಸಾಂ ಇಲ್ದೇ ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್​: ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ

04 May 2021.2:55 PM

ಬೆಂಗಳೂರು: ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸುರೇಶ್​ ಕುಮಾರ್​, ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಪರೀಕ್ಷೆ ಆರಂಭವಾಗುವ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ವಿಚಲಿತರಾಗದೆ ಶ್ರದ್ಧೆಯಿಂದ ಎಂದಿನಂತೆ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಮನವಿ ಮಾಡಿದರು.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ಪ್ರಥಮ ಪಿಯು ಪರೀಕ್ಷೆಗಳನ್ನು ನಡೆಸಬೇಕು ಎಂದು ಈ ಹಿಂದೆ ನಿರ್ಧರಿಸಲಾಗಿತ್ತು.

ಇದೀಗ ಕೋವಿಡ್ ಹಿನ್ನೆಲೆ ಪ್ರಥಮ ಪಿಯು ಪರೀಕ್ಷೆ ರದ್ದು ಮಾಡಿದ್ದು, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವುದಾಗಿ ಸುರೇಶ್​ ಕುಮಾರ್​ ತಿಳಿಸಿದರು.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ: ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಉಪನ್ಯಾಸಕರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags