Kannada News Now

1.8M Followers

BIG BREAKING NEWS : ಕೊರೋನಾ ಹೆಚ್ಚಳದ ಎಫೆಕ್ಟ್ : UGC NET-2020 ಪರೀಕ್ಷೆ ಮುಂದೂಡಿಕೆ

20 Apr 2021.4:03 PM

ನವದೆಹಲಿ : ಮೇ 2ರಂದು ಪ್ರಾರಂಭವಾಗಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಮೇ 2ರಿಂದ ಆರಂಭವಾಗಬೇಕಿದ್ದಂತ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಇಂತಹ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಅಂದಹಾಗೆ, ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತೆಯನ್ನು ನಿರ್ಧರಿಸಲು ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್ ಎಫ್) ನೀಡಲು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ.

ಯುಜಿಸಿ ನೆಟ್ ಪರೀಕ್ಷೆ ಮೇ.2ರಿಂದ ಆರಂಭಗೊಂಡು, ಮೇ.17 ರವರೆಗೆ ನಡೆಯಬೇಕಿತ್ತು. ಆದಾಗ್ಯೂ, ಕೋವಿಡ್-19 ಸಾಂಕ್ರಾಮಿಕರೋಗದ ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ಮತ್ತು ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಗಣನೆಗೆ ತೆಗೆದುಕೊಂಡು, ಯುಜಿಸಿ ನೆಟ್ ಡಿಸೆಂಬರ್ 2020 (ಮೇ 2021) ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ' ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags