Kannada News Now

1.8M Followers

ಹಾಲ್ ಟಿಕೆಟ್ ತಿದ್ದುಪಡಿ : `ದ್ವಿತೀಯ PUC' ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

07 May 2021.05:41 AM

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆಯಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ತಿದ್ದುಪಡಿಗಳಿದ್ದಲ್ಲಿ ಮೇ. 20 ರೊಳಗೆ ಮನವಿ ಸಲ್ಲಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಎಸ್ ಎಟಿಎಸ್ ಪೋರ್ಟಲ್ ಮೂಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕರಡು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಅದನ್ನು ಕೆಂಪು ಶಾಯಿಯಿಂದ ಗುರುತು ಮಾಡಿ ಹಾಗೂ ತಿದ್ದುಪಡಿಗೆ ತಮ್ಮ ಕಾಲೇಜು ಪ್ರಾಂಶುಪಾಲರ ಮೊಹರು ಹಾಕಿ ದೃಢೀಕರಿಸಿ ಇ-ಮೇಲ್ 2puatcorrection n@gmail.com ವಿಳಾಸಕ್ಕೆ ಸಲ್ಲಿಸಬೇಕು.

ತಿದ್ದುಪಡಿಗೆ ಪೂರಕ ದಾಖಲೆಗಳ ಪಿಡಿಎಫ್ ಪ್ರತಿ ನೀಡಬೇಕು. ವಿವರಗಳನ್ನು ಕ್ರೋಡೀಕರಿಸಿ ಪ್ರಾಂಶುಪಾಲರೇ ಕಾಲೇಜಿನಲ್ಲಿರುವ ದಾಖಲೆಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags