Kannada News Now

1.8M Followers

BREAKING NEWS : ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು : ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್

07 May 2021.11:39 AM

*ಅವಿನಾಶ್ ಆರ್. ಭೀಮಸಂದ್ರ ಜೊತೆ ಸಲ್ಮಾನ್ ಬೆಳ್ಳೂಡಿ

ನವದೆಹಲಿ : ಕರ್ನಾಟಕಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಳಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿ ನೀಡಬೇಕು ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಸುಪ್ರಿಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್ ನ್ಯಾ. ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 414,188 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 21,491,598 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,915 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 234,083 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 1,76,12,351 ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 36,45,164 ಸಕ್ರಿಯ ಪ್ರಕರಣಗಳಿವೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags