Kannada News Now

1.8M Followers

BIG BREAKING NEWS : ರಾಜ್ಯ ಸರ್ಕಾರದಿಂದ 'ಖಾಸಗಿ ಆಸ್ಪತ್ರೆ'ಗಳಲ್ಲಿ 'ಸಿಟಿ ಸ್ಕ್ಯಾನಿಂಗ್'ಗೆ ರೂ.1,500 ದರ ನಿಗದಿ

07 May 2021.1:08 PM

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಗೆ ರೂ.1,500 ದರವನ್ನು ನಿಗದಿಗೊಳಿಸಲಾಗಿದೆ. ಇದಕ್ಕಿಂತ ಹೆಚ್ಚಿನ ಹಣ ಪಡೆದ್ರೇ.. ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಅವರು ಆದೇಶ ಹೊರಡಿಸಿದ್ದು, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ ಎಂದಿದ್ದಾರೆ.

ಇನ್ನೂ ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags