Kannada News Now

1.8M Followers

BIG NEWS : ರಾಜ್ಯದಲ್ಲಿ 'SSLC, ದ್ವಿತೀಯ PUC ಪರೀಕ್ಷೆ' ರದ್ದು.? ಈ ಬಗ್ಗೆ 'ಸಚಿವ ಸುರೇಶ್ ಕುಮಾರ್' ಹೇಳಿದ್ದೇನು ಗೊತ್ತಾ.?

17 May 2021.11:20 AM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೋವಿಡ್ ತೀವ್ರ‌ ಪ್ರಸರಣದ‌ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು‌ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪ್ರಕಟಿಸಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ‌ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.

ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags