Kannada News Now

1.8M Followers

BIGG BREAKING NEWS : ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ, ಜೂನ್.15ರಿಂದ ನೊಂದಣಿ ಆರಂಭ - ಡಿಸಿಎಂ ಡಾ.ಅಶ್ವತ್ಥನಾರಾಯಣ ಘೋಷಣೆ

08 Jun 2021.12:03 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದಾಗಿ ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ, ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ ಮಾಡಿದೆ. ಆಗಸ್ಟ್ 28, 29ರಂದು ನಡೆಸಲು ನಿರ್ಧರಿಸಿದೆ.

ವಾಹನ ಸವಾರರ ಜೇಬಿಗೆ ಕತ್ತರಿ : ದೇಶದ ಹಲವು ಜಿಲ್ಲೆಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್ ಬೆಲೆ : ಎಲ್ಲೆಲ್ಲಿ, ಎಷ್ಟಿದೆ ನೋಡಿ…

ಈ ಕುರಿತಂತೆ ಇಂದು ಸಿಇಟಿ ವಿಚಾರವಾಗಿ ನಡೆದಂತ ಸಭೆಯ ನಂತ್ರ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸಿಇಟಿ ಸಭೆ ವಿಚಾರದಲ್ಲಿ ಸಭೆಯನ್ನು ಕರೆಯಲಾಗಿತ್ತು.

ಈ ಸಭೆಯಲ್ಲಿ ವಿವಿಧ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದರು. ಸಚಿವ ಸುರೇಶ್ ಕುಮಾರ್ ಸಲಹೆಯನ್ನು ನೀಡಿ, ದ್ವಿತೀಯ ಪಿಯು ಅಂಕಗಳನ್ನು ಈ ಬಾರಿ ಪರಿಗಣಿಸದಂತೆ ಮನವಿ ಮಾಡಿದ್ದರು. ಸಿಇಟಿ ಆಧಾರದ ಮೇಲೆ RANK ನೀಡುವ ಕಾರ್ಯ ನಡೆಯಬೇಕು ಎಂಬುದಾಗಿ ತಿಳಿಸಿದ್ದರು. ಈ ವಿಚಾರವಾಗಿ ವಿಸೃತವಾಗಿ ಚರ್ಚೆ ಮಾಡಿ, ಸಂಬಂಧ ಪಟ್ಟ ಎಲ್ಲಾ ಕೌನ್ಸಿಲ್ ಗಳಿಗೆ ಪತ್ರವನ್ನು ಬರೆದು, ಈ ಬಗ್ಗೆ ರಿಲ್ಯಾಕ್ಸೇಷನ್ ಕೊಡುವಂತೆ ಕೋರಲಾಗುತ್ತದೆ ಎಂದರು.

ಕೊರೋನಾದಿಂದ ಮೃತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕುಟುಂಬಸ್ಥರೇ ಗಮನಿಸಿ : ರಾಜ್ಯ ಸರ್ಕಾರದಿಂದ ಈ ಎಲ್ಲಾ ಆರ್ಥಿಕ ನೆರವು ಲಭ್ಯ.!

ಪಿಯುಸಿ ಮಾರ್ಕ್ ಅನ್ನು ಈ ವರ್ಷ ತೆಗೆದುಕೊಳ್ಳೋದಿಲ್ಲ. ಈ ವರ್ಷ ಸಿಇಟಿ ಪರೀಕ್ಷೆಯ ಅಂಕವನ್ನು ಪರಿಗಣಿಸಿಯೇ RANK ನೀಡುವಂತ ಕಾರ್ಯವನ್ನು ಮಾಡಲಾಗುತ್ತದೆ. ಅದೇ ರೀತಿ ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಮೊದಲ ದಿನ ಮ್ಯಾಥಮೇಟಿಕ್ಸ್ ಹಾಗೂ ಬಯೋಲಜಿ ಪರೀಕ್ಷ ನಡೆಯಲಿದೆ. ಎರಡನೇ ದಿನ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ. ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ. ಜೂನ್.15ರಿಂದ ಸಿಇಟಿ ಪರೀಕ್ಷೆ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.

BIG NEWS : ಜೂನ್ 13ರವರೆಗೆ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರಿಗೆ ಕಚೇರಿ ಹಾಜರಾತಿಯಿಂದ ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಆದೇಶ

ಸಿಇಟಿನಲ್ಲಿ ನೀಟ್ ತರ ಮಿನಿಮಮ್ ಮಾರ್ಕ್ ಪರಿಗಣಿಸೋ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂಕಿ ಅಂಶಗಳನ್ನು ನೋಡಿ, ಯಾವುದು ಸೂಕ್ತ ಎನ್ನುವ ಬಗ್ಗೆ ಇದೆ. ಈ ದಿಕ್ಕಿನಲ್ಲಿ ಕೂಡ ಚರ್ಚೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದರು.

ವರದಿ : ವಸಂತ ಬಿ ಈಶ್ವರಗೆರೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags