ಕನ್ನಡ ಪ್ರಭ

1.2M Followers

ಖ್ಯಾತ ವಿಜ್ಞಾನಿ ಸಿ.ಎನ್.ಆರ್ ರಾವ್ ಗೆ ಪ್ರತಿಷ್ಠಿತ ಇಎನ್ ಐ ಅಂತಾರಾಷ್ಟ್ರೀಯ ಪ್ರಶಸ್ತಿ!

28 May 2021.01:38 AM

ಬೆಂಗಳೂರು: ಭಾರತ ರತ್ನ ಪುರಸ್ಕೃತ ವಿಜ್ಞಾನಿ, ಪ್ರಾಧ್ಯಾಪಕ ಸಿ.ಎನ್.ಆರ್ ರಾವ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ ಐ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಗುರುವಾರ ತಿಳಿಸಿದೆ.

ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿ ಸಂದಿದೆ. ಇದನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಗುರುತಿಸಲಾಗಿದೆ.

ಪ್ರೊಫೆಸರ್ ರಾವ್ ಶಕ್ತಿಯ ಮೂಲವಾಗಿ ಹೈಡ್ರೋಜನ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೈಡ್ರೋಜನ್ ಸಂಗ್ರಹಣೆ, ಹೈಡ್ರೋಜನ್ ನ ದ್ಯುತಿ ರಾಸಾಯನಿಕ ಮತ್ತು ಎಲೆಕ್ಟ್ರೋಕೆಮಿಕಲ್ ಉತ್ಪಾದನೆ, ಹೈಡ್ರೋಜನ್ ನ ಸೌರ ಉತ್ಪಾದನೆ ಮತ್ತು ಲೋಹವಲ್ಲದ ವೇಗವರ್ಧನೆ ಅವರ ಕೆಲಸದ ಪ್ರಮುಖ ಅಂಶಗಳಾಗಿವೆ.

ರೋಮ್ ನಲ್ಲಿ ಅಕ್ಟೋಬರ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಅಧಿಕೃತವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Prabha

#Hashtags