ಆಂದೋಲನ

31k Followers

ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ: ಇಂದು ಅಂತಿಮ ನಿರ್ಧಾರ?

01 Jun 2021.09:57 AM

ಹೊಸದಿಲ್ಲಿ: ಕೋವಿಡ್‌ ಕಾರಣದಿಂದಾಗಿ ಮುಂದೂಡಲ್ಪಟ್ಟಿರುವ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆಗಳನ್ನು ನಡೆಸುವ ಸಂಬಂಧ ಕೇಂದ್ರದ ಶಿಕ್ಷಣ ಇಲಾಖೆ ಇಂದು (ಮಂಗಳವಾರ) ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಈಗಾಗಲೇ ದೇಶದ ಎಲ್ಲಾ ರಾಜ್ಯಗಳಿಂದ ಪರೀಕ್ಷೆಯ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಇಂದು ಹಿರಿಯ ಅಧಿಕಾರಿಗಳು ಮತ್ತು ತಜ್ಞರಿಂದ ಮಾಹಿತಿ ಕಲೆಹಾಕಲಿದೆ. ಹೀಗಾಗಿ, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ಸಹ ಪರೀಕ್ಷೆಯನ್ನು ಯಾಕೆ ರದ್ದುಗೊಳಿಸಬಾರದು ಎಂದು ಕೇಂದ್ರಕ್ಕೆ ಪ್ರಶ್ನಿಸಿದೆ. ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಗುರುವಾರ ಸುಪ್ರೀಂ ನಿರ್ಧಾರ ತೆಗೆದುಕೊಳ್ಳುವ ಸಾದ್ಯತೆ ಇದೆ ಎನ್ನಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Andolana

#Hashtags