Kannada News Now

1.8M Followers

SSLC, ದ್ವಿತೀಯ PUC ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ : ಶಿಕ್ಷಣ ಸಚಿವರಿಗೆ ವಾಟಾಳ್ ನಾಗರಾಜ್ ಮನವಿ

01 Jun 2021.1:47 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟಿಸುತ್ತಿದೆ. ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ ನಿಗದಿಯಾಗಿದ್ದಂತ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ಮುಂದೂಡಲಾಗಿದೆ. ಆದ್ರೇ.. ಈ ಪರೀಕ್ಷೆಗಳನ್ನು ನಡೆಸದೇ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರನ್ನು, ಭೇಟಿಯಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

VIRAL VIDEO : ಸಣ್ಣ ಮಕ್ಕಳಿಗೆ ಎಷ್ಟೊಂದು ಹೋಂ ವರ್ಕ್ ಹೊರೆ… ಪ್ರಧಾನಿ ಮೋದಿಗೆ ಮುದ್ದಾದ ದೂರು ನೀಡಿದ ಬಾಲೆ

ಇಂದು ಬಸವೇಶ್ವರ ನಗರದಲ್ಲಿರುವಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನಿವಾಸಕ್ಕೆ ತೆರಳಿದಂತ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರು, ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಮಾಡಿದರು.

ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲು, 59 ಮಂದಿ ಸಾವು

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ವಾಟಾಳ್ ನಾಗರಾಜ್ ಅವರು, 10 ತಿಂಗಳ ಪಠ್ಯವನ್ನ 2 ತಿಂಗಳಲ್ಲಿ ಆನ್‌ಲೈನ್ ನಲ್ಲಿ ನಡೆಸಿ ವಿದ್ಯಾರ್ಥಿಗಳನ್ನ ಪರೀಕ್ಷೆಗೆ ಕೂರಿಸಿದರೆ ಹೇಗೆ? ಮಕ್ಕಳು ಯುವಕರಿಗೆ ಕೊರೋನಾ ಇನ್ನಿಲ್ಲದೆ ಬಾಧಿಸುತ್ತಿದೆ ಎಂಬುದಾಗಿ ಕಿಡಿ ಕಾರಿದರು.

ರಾಜ್ಯದ ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ವಿಶೇಷ ಪ್ಯಾಕೇಜ್

ಸರ್ಕಾರ ಸತ್ತವರಿಗೆ ಸೂಕ್ತ ಪರಿಹಾರ ನೀಡಿಲ್ಲ. ಕೂಡಲೇ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬುದಾಗಿ ಇದೇ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಒತ್ತಾಯಿಸಿದರು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags