TV9 ಕನ್ನಡ

371k Followers

Karnataka Unlock Guidelines: 10 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು ಅನ್​ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ

10 Jun 2021.8:01 PM

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರದಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ಮುಂದುವರಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್​ ಇರುವ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಿಗೆ ಕೆಲವು ವಿನಾಯಿತಿ, ಕೆಲವು ನಿರ್ಬಂಧ ಸಡಿಲಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

(Karnataka Lockdown Extension CM BS Yediyurappa Take note of Coronavirus Situation in state Decides to continue Lockdown in 10 districts)

ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದ ಎಂಟು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊವಿಡ್ ಲಾಕ್​ಡೌನ್ ವಿನಾಯಿತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು.

ಈ ಜಿಲ್ಲೆಗಳಲ್ಲಿ ಅಗತ್ಯ ವಸ್ತು ಖರೀದಿ ಸಮಯ ಹೆಚ್ಚಳ, ಕೈಗಾರಿಕೆಗೆ ವಿನಾಯಿತಿ ನೀಡುವುದು, ಶೇಕಡಾ 50ರಷ್ಟು ಸಿಬ್ಬಂದಿ ಕರ್ತವ್ಯ ನಿರ್ವಹಣೆಗೆ ಅವಕಾಶ, ಸೀಮಿತ ಅವಧಿಗೆ ಪಾರ್ಕ್ ಓಪನ್, ಬಸ್ ಸಂಚಾರ ಹಾಗೂ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರದಲ್ಲಿ ಪೂರ್ತಿ ಅವಕಾಶ ಸಾಧ್ಯತೆ ನೀಡುವ ಸಾಧ್ಯತೆ ವ್ಯಕ್ತವಾಗಿತ್ತು. ಹೆಚ್ಚು ಜನ ಸಂದಣಿಗೆ ಕಾರಣವಾಗುವ ಕ್ಷೇತ್ರಗಳಿಗೆ ವಿನಾಯಿತಿ ನೀಡುವುದು ಅನುಮಾನ ಈ ಮುನ್ನವೇ ವ್ಯಕ್ತವಾಗಿತ್ತು.

The post Karnataka Unlock Guidelines: 10 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು ಅನ್​ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ appeared first on TV9 Kannada.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags