Kannada News Now

1.8M Followers

BIGG NEWS : 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಚಂದನದಲ್ಲಿ ಪ್ರತಿದಿನ ವಿಡಿಯೋ ಪಾಠಗಳ ಪ್ರಸಾರ

21 Jun 2021.8:28 PM

ಬೆಂಗಳೂರು : 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಚಂದನದಲ್ಲಿ ಪ್ರತಿದಿನ ವಿಡಿಯೋ ಪಾಠಗಳ ಪ್ರಸಾರ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವ ಹಿನ್ನೆಲೆ ಜುಲೈ 1 ರಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿದಿನ ವಿಡಿಯೋ ಪಠಗಳನ್ನ ಪ್ರಸಾರ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕನ್ನಡ, ಇಂಗ್ಲೀಷ್ ಹಾಗೂ ಉರ್ದು ಮಾಧ್ಯಮದ ಪಾಠಗಳು ಪ್ರಸಾರವಾಗಲಿದ್ದು, ಈ ತರಗತಿಗಳು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆಯಲಿದ್ದು, ಸಂವೇದಾ ದೂರದರ್ಶನ ಪಾಠ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಮೂಡಿ ಬರಲಿದೆ .ತರಗತಿ ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ಮರಾಠಿ ಮಾಧಮ ಪಾಠಗಳನ್ನು ಯೂ ಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಲಾಗುವುದು ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

* ಶಾಲೆ ಆರಂಭದ ಕುರಿತು ಸಚಿವರಿಂದ ಮಾಹಿತಿ

ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿಶೆಟ್ಟಿ ಅವರ ವರದಿಯು ತಮ್ಮ‌ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ‌ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‌ ಕುಮಾರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಗತಿ ಕಲಿಕೆಯ ಬಗ್ಗೆ ವರದಿಯಲ್ಲಿ‌ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿಯಷ್ಟೇ ನೋಡಿದ್ದೇನೆ.‌ವರದಿ ತಮ್ಮ‌ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಯಿಸಲು ಸಾಧ್ಯ ಎಂದರು.

ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ‌ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

BREAKING : ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲ : ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

Shocking News: ʼಪಬ್ಜಿ ಮೊಬೈಲ್‌ ಇಂಡಿಯಾʼದಿಂದ ಚೀನಾ ದೇಶಕ್ಕೆ ಡೇಟಾ ರವಾನೆ: ವರದಿಯೊಂದರಿಂದ ಬೆಚ್ಚಿ ಬೀಳುವ ಸಂಗತಿ ಬಹಿರಂಗ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags