Kannada News Now

1.8M Followers

BIG NEWS : ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ

20 Jun 2021.10:20 AM

ಬೆಂಗಳೂರು : ರಾಜ್ಯದಲ್ಲಿ ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ಶುರು ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

BIG BREAKING NEWS : ಭಾರತದಲ್ಲಿಂದು ಹೊಸದಾಗಿ 58,419 ಕೊರೊನಾ ಕೇಸ್, 1,576 ಮಂದಿ ಸಾವು

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15 ರಿಂದ ಆನ್ ಲೈನ್ ತರಗತಿಗಳು ಪ್ರಾರಂಭ ಮಾಡಲು ನಿರ್ಧರಿಸಲಾಗಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? `UID'ಸಂಖ್ಯೆಯನ್ನು ಹಿಂಪಡೆಯುವದು ಹೇಗೆ? ಇಲ್ಲಿದೆ ಮಾಹಿತಿ

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಡೆಯಬೇಕಿದ್ದ ಪಿಯು ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿದೆ.

ಎಸ್‌ಎಸ್‌ಎಲ್ ಸಿ ಮತ್ತು ಪ್ರಥಮ ಪಿಯು ಅಂಕಗಳನ್ನು ಅವಲೋಕಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂಕವನ್ನು ನೀಡಲು ನಿರ್ಧರಿಸಲಾಗಿದೆ.

ಬ್ರೇಕಿಂಗ್‌: ಅತ್ಯಾಚಾರ ಕೇಸ್‌ನಲ್ಲಿ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್ ಬೆಂಗಳೂರಿನಲ್ಲಿ ಬಂಧನ

ಪ್ರಥಮ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮೊದಲು ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುವುದು. ಕೊರೊನಾ ಸ್ಥಿತಿಗತಿ ನೋಡಿಕೊಂಡು ಭೌತಿಕ ತರಗತಿಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುವುದು. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಜುಲೈ ಕೊನೆಯ ವಾರದಿಂದಲೇ ಭೌತಿಕ ತರಗತಿಗಳನ್ನು ಆರಂಭವಾಗುವ ಸಾಧ್ಯತೆ ಇದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags