Kannada News Now

1.8M Followers

ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ಪಾಸಾಗುವ ಭಾಗ್ಯ?

30 Jun 2021.06:47 AM

ಬೆಂಗಳೂರು : ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಫೇಲಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎನ್ನಲಾಗಿದೆ.

ರವಿಶಂಕರ್ ಪ್ರಸಾದ್, ತರೂರ್ ಟ್ವಿಟರ್ ಖಾತೆ ಲಾಕ್ : ಟ್ವಿಟರ್ ನಿಂದ ಪ್ರತಿಕ್ರಿಯೆ ಕೋರಿದ ಸಂಸದೀಯ ಸಮಿತಿ

ಪದವಿ ಪೂರ್ವ ಶಿಕ್ಷಣ ಇಲಾಖೆ ರಚಿಸಿದ್ದ ತಜ್ಞರ ಸಮಿತಿ ವರದಿಯನ್ನು ಸರ್ಕಾರ ನ್ಯಾಯಾಲಯದ ಮುಂದಿಡಲಿದ್ದು, ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ ಸಮ್ಮತಿಸಿದರೆ ಇದರೊಂದಿಗೆ ಸುಮಾರು 1 ಲಕ್ಷದಷ್ಟು ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೇ ಈ ಬಾರಿ ಪಾಸಾಗುವ ಭಾಗ್ಯ ದೊರೆಯಲಿದೆ ಎನ್ನಲಾಗಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಗೆ ನೆಗೆಟಿವ್ ವರದಿ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ

ಸರ್ಕಾರ ದ್ವಿತೀಯ ಪಿಯುಸಿಯ 5.86 ಲಕ್ಷ ಹೊಸ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಿದೆ. ಈಗ ಈ ಪಟ್ಟಿಗೆ ಇನ್ನೂ ಒಂದು ಲಕ್ಷದಷ್ಟು ವಿದ್ಯಾರ್ಥಿಗಳು ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಅವಕಾಶ ಒಟ್ಟು 6.86 ಲಕ್ಷ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ಸಾರಿಗೆ ಇಲಾಖೆಯಿಂದ ವಾಹನ ಮಾಲೀಕರಿಗೆ ಸಿಹಿಸುದ್ದಿ : ತೆರಿಗೆ ಪಾವತಿಗೆ ಮತ್ತೆ ಅವಧಿ ವಿಸ್ತರಣೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags