Kannada News Now

1.8M Followers

BIG NEWS : ಅನುಕಂಪದ ನೌಕರಿ ಪಡೆಯಲು ಎರಡನೇ ಪತ್ನಿ ಮಕ್ಕಳು ಅರ್ಹರು : ಕರ್ನಾಟಕ ಹೈಕೋರ್ಟ್

15 Jul 2021.09:05 AM

ಬೆಂಗಳೂರು : ಎರಡನೇಯ ಪತ್ನಿಯ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅಧಿಕಾರವಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ರೆಡ್, ಆರೆಂಜ್, ಯೆಲ್ಲೋ' ಅಲರ್ಟ್ ಘೋಷಣೆ

ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರರಲ್ಲ ಎಂದು 2011 ರ ಕೆಪಿಟಿಸಿಎಲ್ ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ನೇತೃತ್ವದ ವಿಭಾಗಿಯ ಪೀಠ ಈ ಅಭಿಪ್ರಾಯಪಟ್ಟಿದ್ದು, ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ ಅವರ ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಗುರುತಿಸಬೇಕು ಎಂದು ಹೇಳಿದೆ.

ಒಂದು ದಿನದಲ್ಲಿ ಎಷ್ಟು ಹೆಜ್ಜೆ ನಡೆಯುವುದು ಆರೋಗ್ಯಕ್ಕೆ ಉತ್ತಮ ಗೊತ್ತಾ?

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಡವೆಕೆರೆ ನಿವಾಸಿ ಸಂತೋಷ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ವಿಭಾಗೀಯ ಪೀಠ.

ಲೈನ್ ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014 ರ ಜೂನ್ ನಲ್ಲಿ ನಿಧನರಾದರು. ಅನುಕಂಪದ ಆಧಾರದಲ್ಲಿ ನೌಕರಿ ಕೋರಿ ಎರಡನೇ ಪತ್ನಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಕೆಪಿಟಿಸಿಎಲ್ ತಿರಸ್ಕರಿಸಿತ್ತು.

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : 35,000 ʼಕಾಲೇಜು ಪದವೀಧರʼರ ನೇಮಕಕ್ಕೆ ಮುಂದಾದ ಇನ್ಫೊಸಿಸ್‌..!

ʼಡ್ರೈವಿಂಗ್‌ ಲೈಸನ್ಸ್‌ʼ ಜೊತೆ ಆಧಾರ್ ಕಾರ್ಡ್ ಲಿಂಕ್‌ ಮಾಡುವುದ್ಹೇಗೆ ಗೊತ್ತಾ? ಈ ಸರಳ ಹಂತಗಳನ್ನ ಅನುಸರಿಸಿ

ತಂದೆ ಮತ್ತು ತಾಯಿ ಇಲ್ಲದೆ ಮಗು ಜನಿಸಲು ಸಾಧ್ಯವಿಲ್ಲ. ಜನ್ಮ ತಾಳುವ ಪ್ರಕ್ರಿಯೆಯಲ್ಲಿ ಮಗುವಿನ ಪಾತ್ರ ಏನೂ ಇರುವುದಿಲ್ಲ. ಆದ್ದರಿಂದ, ಪೋಷಕರು ಅನಧಿಕೃತ ಇರಬಹುದು, ಆದರೆ, ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಪರಿಗಣಿಸಬೇಕಾಗುತ್ತದೆ. ಮಕ್ಕಳೆಲ್ಲರೂ ಸಮಾನರು ಎಂಬ ಕಾನೂನನ್ನು ಜಾರಿಗೆ ತರಬಹುದಾಗಿದೆ. ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳಿಗೂ ನ್ಯಾಯ ದೊರಕಿಸಲು ಸಂಸತ್ ಮುಂದಾಗಬೇಕಿದೆ ಎಂದು ಪೀಠ ಹೇಳಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags