Kannada News Now

1.8M Followers

BIG BREAKING NEWS : 'SDA ಪರೀಕ್ಷೆ'ಗೆ ಕೆಪಿಎಸ್ಸಿಯಿಂದ ಪರಿಷ್ಕೃತ ದಿನಾಂಕ ಪ್ರಕಟ : ಸೆ.18, 19ಕ್ಕೆ ಪರೀಕ್ಷೆ ನಿಗದಿ

30 Jun 2021.6:48 PM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತಿದ್ದಂತ ಎಸ್ ಡಿ ಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ನಡೆಸಲು ಇದೀಗ ಕೆಪಿಎಸ್ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಹಾಗೂ 19ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಿದೆ.

ರಾಜ್ಯ ಸರ್ಕಾರದಿಂದ 'ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ : 7 `IAS' ಅಧಿಕಾರಿಗಳ ವರ್ಗಾವಣೆ

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 29-02-2020ರ ಅಧಿಸೂಚನೆಯಲ್ಲಿ 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಆಯೋಗವು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿ ಈ ಕೆಳಕಂಡಂತೆ ಪ್ರಕಟಿಸಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ 'ಎಸ್ ಡಿ ಎ ಪರೀಕ್ಷೆ'ಯ ಪರಿಷ್ಕೃತ ವೇಳಾಪಟ್ಟಿ

  • ದಿನಾಂಕ 18-09-2021ರ ಶನಿವಾರ ಬೆಳಿಗ್ಗೆ 10 ರಿಂದ 11.30ರವರೆಗೆ - ಪತ್ರಿಕೆ -1 : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
  • ದಿನಾಂಕ 19-09-2021ರ ಭಾನುವಾರ ಬೆಳಿಗ್ಗೆ 10 ರಿಂದ 11.30ರವರೆಗೆ ಪತ್ರಿಕೆ-3 - ಸಾಮಾನ್ಯ ಜ್ಞಾನ. ಪತ್ರಿಕೆ -2 ಮಧ್ಯಾಹ್ನ 2 ರಿಂದ 3.30ರವರೆಗೆ - ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags