Kannada News Now

1.8M Followers

`ಸಂವೇದಾ ಇ-ಕ್ಲಾಸ್' : 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

01 Jul 2021.06:23 AM

ಬೆಂಗಳೂರು : ಕೋವಿಡ್-19ರ ಸೋಂಕಿನಿಂದಾಗಿ 2021-22ನೇ ಸಾಲಿನ ಭೌತಿಕ ತರಗತಿಗಳು ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜು. 5ರಿಂದ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

'ವರ್ಗಾವಣೆ ನಿರೀಕ್ಷೆ'ಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದಿನಿಂದ 'ಶಿಕ್ಷಕರ ವರ್ಗಾವಣೆ'ಗೆ ಚಾಲನೆ - ಸಚಿವ ಸುರೇಶ್ ಕುಮಾರ್

ರಾಜ್ಯದ ಎಲ್ಲ ಶಿಕ್ಷಕರು ಸದರಿ ವೇಳಾಪಟ್ಟಿಯನ್ನು ತಮ್ಮಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ತಲುಪಿಸಿ ಅವರೊಂದಿಗೆ ಸಮನ್ವಯ ಸಾಧಿಸಿ ನಿಗದಿತ ಸಮಯದಲ್ಲಿ ನಿಗದಿತ ತರಗತಿಯ ವಿದ್ಯಾರ್ಥಿಗಳು ಸಂವೇದಾ ತರಗತಿಗಳನ್ನು ವೀಕ್ಷಿಸುವಂತೆ ಕ್ರಮ ಕೈಗೊಂಡು ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮೌಲ್ಯಮಾಪನ ವಿವರಗಳನ್ನು ನಿರ್ವಹಿಸಲಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ 'ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ : 7 `IAS' ಅಧಿಕಾರಿಗಳ ವರ್ಗಾವಣೆ

ಯಾವುದೇ ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅವಕಾಶದ ಕೊರತೆಯಿದ್ದಲ್ಲಿ ಆಯಾ ಶಾಲೆಯ ಶಿಕ್ಷಕರು ಎಸ್‍ಡಿಎಂಸಿ ಸದಸ್ಯರ ನೆರವು ಪಡೆದು ವಿದ್ಯಾರ್ಥಿಗೆ ದೂರದರ್ಶನ ವೀಕ್ಷಿಸಲು ಅನುಕೂಲ ಮಾಡುವುದು ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕೆಯನ್ನು ಪರಿಣಾಮಕಾರಿಗೊಳಿಸಬೇಕೆಂದು ಕಲ್ಪಿಸಬೇಕೆಂದು ಅವರು ತಿಳಿಸಿದ್ದಾರೆ.

'ಸಾರಿಗೆ ನೌಕರ'ರಿಗೆ ಗುಡ್ ನ್ಯೂಸ್ : ಜು.15ರವರೆಗೆ 'ಅಂತರ ನಿಗಮ ವರ್ಗಾವಣೆ'ಗೆ ಅರ್ಜಿ ಸಲ್ಲಿಸಲು ಅವದಿ ವಿಸ್ತರಣೆ

1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ. ಮಕ್ಕಳು ಸಂವೇದಾ ತರಗತಿಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವರು ಕೋರಿದ್ದಾರೆ.

ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ʼಜು.1ʼರಿಂದ ರೈಲು ಸಮಯ ವಿಸ್ತರಣೆ, ಬೆಳಿಗ್ಗೆ 7 ರಿಂದ 6 ರವರೆಗೆ ಮೆಟ್ರೋ ಓಡಾಟ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags