Kannada News Now

1.8M Followers

ರಾಜ್ಯದ ಎಲ್ಲಾ ಇಲಾಖೆಗಳ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು ಶೇ.100ರಷ್ಟು ಕರ್ತವ್ಯಕ್ಕೆ ಹಾಜರಾಗಿ : ರಾಜ್ಯ ಸರ್ಕಾರ ಆದೇಶ

06 Jul 2021.08:59 AM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳದ ನಡುವೆಯೂ ರಾಜ್ಯ ಸರ್ಕಾರ ಅತ್ಯಗತ್ಯ ಸೇವೆಗಳನ್ನು ಒದಗಿಸುವಂತ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಆದ್ರೇ ಕೆಲ ಇಲಾಖೆಯ ನೌಕರರಿಗೆ ಕಚೇರಿ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿತ್ತು. ಇದೀಗ ಆ ಇಲಾಖೆಯ ನೌಕರರು ಕೂಡ ಶೇ.50ರಷ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

BREAKING : 'ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ' ಮಾಧ್ಯಮ ಸಲಹೆಗಾರ 'ಕೆ.ಸಿ.ಸದಾನಂದ' ಇನ್ನಿಲ್ಲ

ಇನ್ನುಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್-ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗತಕ್ಕದ್ದು ಮತ್ತು ಗ್ರೂಪ್-ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ದಿನಾಂಕ 19-06-2021ರ ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು.

ರಾಜ್ಯ ಕಾರ್ಯಕಾರಿ ಸಮಿತಿಯ ಪರಿಷ್ಕೃತ ದಿನಾಂಕ 03-07-2021ರಲ್ಲಿನ ಮಾರ್ಗಸೂಚಿಯನ್ವಯ, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ನಿಯಂತ್ರಣಕ್ಕೆ ಬಂದಿರುವುದರಿಂದ ಸಚಿವಾಲಯದ ಎಲ್ಲಾ ಇಲಾಖೆಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಶೇ.100ರಷ್ಟು ಹಾಜರಾತಿಯೊಂದಿಗೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಕರ್ತವ್ಯ ನಿರ್ವಹಿಸಲು ಸೂಚಿಸಿದೆ.

ಸಂಪುಟ ವಿಸ್ತರಣೆಗೆ ಮುನ್ನ ಇಂದು ಸಚಿವರ ಜೊತೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ

ದೃಷ್ಠಿ ಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಸುತ್ತೋಲೆಯು ದಿನಾಂಕ 19-07-2021ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags