Kannada News Now

1.8M Followers

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ನೌಕರರ ಕುಟುಂಬದ ಸದಸ್ಯರಿಗೂ 'ಉಚಿತ ಚಿಕಿತ್ಸೆ' ಕಡತಕ್ಕೆ ಸಚಿವ ಸಂಪುಟ ಒಪ್ಪಿಗೆ

23 Jul 2021.06:08 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡೋದಕ್ಕೆ ಆರ್ಥಿಕ ಇಲಾಖೆಗೆ ಸೂಚಿಸುವ ಮೂಲಕ, ಸಿಎಂ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದರು. ಇದರ ಬೆನ್ನಲ್ಲೇ, ಇಂದಿನ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ಕುಟುಂಬಸ್ಥರಿಗೂ ಸಂಪೂರ್ಣ ಉಚಿತ ಚಿಕಿತ್ಸೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಮತ್ತೊಂದು ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರಿ ನೌಕರರಿಗೆ ನೀಡಿದ್ದಾರೆ.

BIG BREAKING NEWS : ರಾಜ್ಯ ಎಲ್ಲಾ 'ಸರ್ಕಾರಿ ಆಸ್ಪತ್ರೆ'ಗಳಲ್ಲಿ 'ಕೋವಿಡೇತರ ಚಿಕಿತ್ಸೆ' ಪುನರ್ ಪಾರಂಭಿಸಿ - 'ಆರೋಗ್ಯ ಇಲಾಖೆ' ಆದೇಶ

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು.

ಈ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಯಾದಂತ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ.

ಗ್ರಾಮೀಣ ಜನರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸಚಿವ ಸಂಪುಟದಲ್ಲಿ ಗ್ರಾಮೀಣ ಭಾಗದಲ್ಲಿ 4 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ

ಸಿಎಂ ಯಡಿಯೂರಪ್ಪ ಅವರು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವಂತ ನಿರ್ಣಯದಿಂದಾಗಿ 6 ಲಕ್ಷ ನೌಕರರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಸುಮಾರು 25 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಆಗಲಿದೆ. ಹೀಗಾಗಿ ಇಂತಹ ಮಹತ್ವದ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಧನ್ಯವಾದ ಸಲ್ಲಿಸಿದೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ.?



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags