ಬಿಸಿ ಸುದ್ದಿ

169k Followers

ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ 10ರೊಳಗೆ ಪ್ರಕಟ : ಸಚಿವ ಸುರೇಶ್ ಕುಮಾರ್

23 Jul 2021.10:02 AM

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದು ಮುಕ್ತಾಯವಾಗಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‍ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸುರೇಶ್ ಕುಮಾರ್ ರಾಜ್ಯದಲ್ಲೆಡೆ ಮಳೆ ಅಬ್ಬರ ಮುಂದುವರೆದಿದೆ.

ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಬ್ಬರದ ಮಳೆಯ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ, ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚು ಇದೆ. ಮಕ್ಕಳು ಕೂಡ ಸಂತೋಷ ಮತ್ತು ನಿರಾಳತೆಯೊಂದಿಗೆ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಕೋವಿಡ್​​ ಕೇರ್​ ಸೆಂಟರ್​ನಿಂದ 67 ಮಕ್ಕಳು ಪರೀಕ್ಷೆ ಬರೆದಿದ್ದು, ಕೋಲಾರ ಮತ್ತು ಹಾಸನದಲ್ಲಿ ತಲಾ ಒಬ್ಬ ಪಾಸಿಟಿವ್​ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು. ಇನ್ನು ಐಸೋಲೇಷನ್ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.

ಶಾಲೆ ಆರಂಭಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ : ಶಾಲೆ ಆರಂಭಕ್ಕೂ ಮುನ್ನ ಸಿಬ್ಬಂದಿಗಳಿಗೆ ಲಸಿಕೆ ಕಡ್ಡಾಯ : ಸಚಿವ ಸುಧಾಕರ್

Post navigation

ಶಾಲೆ ಆರಂಭಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ : ಶಾಲೆ ಆರಂಭಕ್ಕೂ ಮುನ್ನ ಸಿಬ್ಬಂದಿಗಳಿಗೆ ಲಸಿಕೆ ಕಡ್ಡಾಯ : ಸಚಿವ ಸುಧಾಕರ್ ಸಿಎಂ ಬದಲಾವಣೆ ವಿಚಾರವಾಗಿ ಎಲ್ಲವನ್ನೂ ಹೈಕಮಾಂಡ್‌ ನೋಡಿಕೊಳ್ಳುತ್ತದೆ : ಸಿ.ಪಿ. ಯೋಗೀಶ್ವರ್‌
Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags