Kannada News Now

1.8M Followers

BIG BREAKING NEWS : 'ರಾಜ್ಯ ಸರ್ಕಾರ'ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಐವರು IAS ಅಧಿಕಾರಿಗಳ ವರ್ಗಾವಣೆ

05 Aug 2021.6:34 PM

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗುತ್ತಿದ್ದಂತೆ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (IAS Officer Transfer ), ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

Corona Update : ಬೆಂಗಳೂರು ನಗರದಲ್ಲಿ 414 ಸೇರಿದಂತೆ ರಾಜ್ಯದಲ್ಲಿ 1,785 ಜನರಿಗೆ ಕೊರೋನಾ, 25 ಸೋಂಕಿತರು ಸಾವು

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ­ಡಾ.ರಾಮಣ ರೆಡ್ಡಿ.ಇ.ವಿ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ್ದಾರೆ.

ಈ ಹುದ್ದೆಯಲ್ಲಿದ್ದಂತ ಡಾ.ರಾಜ್ ಕುಮಾರ್ ಖತ್ರಿಯವರನ್ನು ವರ್ಗಾವಣೆ ಮಾಡಿದ್ದಾರೆ. ಇದರ ಜೊತೆಗೆ ಡಾ.ರಮಣ ರೆಡ್ಡಿ ಅವರಿಗೆ ಹೆಚ್ಚುವರಿ ಹುದ್ದೆಯಾಗಿ ಇನ್ಫರ್ಮೇಷನ್ ಟೆಕ್ನಾಲಜಿ ಹಾಗೂ ವಯೋ ಟೆಕ್ನಾಲಜಿ ಡಿಪಾರ್ಟ್ ಮೆಂಟ್ ನ ಹೊಣೆಗಾರಿಕೆ ವಹಿಸಲಾಗಿದೆ.

ಇನ್ನೂ ಡಾ.ರಾಜ್ ಕುಮಾರ್ ಖತ್ರಿ ಅವರನ್ನು ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಗ್ರಿಕಲ್ಚರಲ್ ಡಿಪಾರ್ಟ್ಮೆಂಟ್ ಗೆ ವರ್ಗಾವಣೆ ಮಾಡಿದ್ದಾರೆ.

ವ್ಯಾಕ್ಸಿನ್ ಮಾಹಿತಿ ಕೇಳೋ ನೆಪದಲ್ಲಿ, ಈ ಶಿಕ್ಷಕ ಮಾಡಿದ್ದೇ ಬೇರೆ.. ಮುಂದೆ ಏನ್ ಆಯ್ತು ಗೊತ್ತಾ.?

ಇನ್ನೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಜಾವೇದ್ ಅಖ್ತರ್ ಅವರನ್ನು ವರ್ಗಾವಣೆ ಮಾಡಿ, ಫಾರೆಸ್ಟ್, ಎಕೋಲಜಿ ಮತ್ತು ಎನ್ವಿರಾರ್ನಮೆಂಟ್ ಡಿಪಾರ್ಮೆಂಟ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ವರ್ಗಾವಣೆ ಮಾಡಿದ್ದಾರೆ.

ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಕೋ ಆಪರೇಟಿವ್ ಡಿಪಾರ್ಟ್ ಮೆಂಟ್ ನ ಪ್ರಿನ್ಸಿಪಲ್ ಸೆಕ್ರೇಟರಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ರೆವಿನ್ಯೂ ಇಲಾಖೆಯಿಂದ ವರ್ಗಾವಣೆ ಮಾಡಿ, ಮುಖ್ಯಮಂತ್ರಿಗಳ ಚೀಫ್ ಸೆಕ್ರೇಟರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದಲ್ಲದೇ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags