Kannada News Now

1.8M Followers

ರಾಜ್ಯ 'ಸರ್ಕಾರಿ ನೌಕರರ ಕುಟುಂಬಸ್ಥ'ರಿಗೆ ಭರ್ಜರಿ ಗುಡ್ ನ್ಯೂಸ್ : 'ನಗದುರಹಿತ ವೈದ್ಯಕೀಯ ಚಿಕಿತ್ಸೆ'ಗಾಗಿ 'ಆರೋಗ್ಯ ಸಜೀವಿನಿ ಯೋಜನೆ' ಜಾರಿ

17 Aug 2021.3:47 PM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ( KASS ) ಜಾರಿಗೊಳಿಸಲು ರೂಪುರೇಷೆ ಸಿದ್ಧಪಡಿಸುವಂತೆ ಸುವರ್ಣ ಆರೋಗ್ಯ ಟ್ರಸ್ಟ್ ಗೆ, ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಭರ್ಜಿ ಗುಡ್ ನ್ಯೂಸ್ ನೀಡಿದೆ.

BIG NEWS : ಮಕ್ಕಳನ್ನು 'ಕೊರೋನಾ ಮಹಾಮಾರಿ'ಯಿಂದ ರಕ್ಷಿಸಲು 'ಸರ್ಕಾರ ಮಾಸ್ಟರ್ ಪ್ಲ್ಯಾನ್' : ನಾಳೆಯಿಂದ ಬೆಂಗಳೂರಿನಲ್ಲಿ 18 ವರ್ಷದೊಳಗಿನವರಿಗೆ ಕೋವಿಡ್ ಪರೀಕ್ಷೆ

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟೀಲ್ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯ ಸರ್ಕಾರವು 2021-22ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ( Karnataka Arogya Sanjeevini Scheme - KASS ) ಎಂಬ ಯೋಜನೆಯನ್ನು ರೂಪಿಸಲು ಹಾಗೂ ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ( SATS ) ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿದೆ.

ಮಕ್ಕಳ ಆರೋಗ್ಯ ತಪಾಸಣೆಗೆ ಕೆಲವೇ ದಿನಗಳಲ್ಲಿ ಆರೋಗ್ಯ ನಂದನ : 1 ಕೋಟಿ ಮಕ್ಕಳಿಗೆ ತಪಾಸಣೆ - ಸಚಿವ ಡಾ.ಕೆ.ಸುಧಾಕರ್

ಈ ನೂತನ ಯೋಜನೆಯನ್ನು ಅನುಷ್ಠಾನಗೊಳಿಸುವ ಪೂರ್ವದಲ್ಲಿ ಈ ಯೋಜನೆಯ ಕಾರ್ಯ ಸ್ವರೂಪ, ಯೋಜನಾ ವೆಚ್ಚ, ಆಯವ್ಯಯ, ವೈದ್ಯಕೀಯ ಚಿಕಿತ್ಸಾ ವಿಧಾನಗಳು, ಚಿಕಿತ್ಸಾ ದರಗಳು, ಫಲಾನುಭವಿಗಳು, ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಹಾಗೂ ಅವುಗಳೊಂದಿಗೆ ಮಾಡಿಕೊಳ್ಳಬೇಕಾದ ಒಡಂಬಡಿಕೆ, ಈ ಯೋಜನೆಗೆ ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಮುಂತಾದ ಅಂಶಗಳ ಬಗ್ಗೆ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ದಪಡಿಸುವುದು ಅತ್ಯಗತ್ಯವೆಂದು ಸರ್ಕಾರವು ಭಾವಿಸಿದೆ.

`ಜೋಗ್ ಫಾಲ್ಸ್' ಪ್ರವಾಸಕ್ಕೆ ಹೋಗುವವರಿಗೆ ಮಹತ್ವದ ಮಾಹಿತಿ : `RT-PCR' ನೆಗೆಟಿವ್ ರಿಪೋರ್ಟ್ ಕಡ್ಡಾಯ

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅಲವಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಯೋಜನಾ ವರದಿಯನ್ನು ಉಲ್ಲೇಖಾಂಶಗಳೊಂದಿಗೆ ಸಿದ್ಧಪಡಿಸಿ, 2 ತಿಂಗಳ ಒಳಗಾಗಿ ಸರ್ಕಾರಕ್ಕೆ ಸಲ್ಲಿಸಲು ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವಿರಗೆ ಆದೇಶಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags