Kannada News Now

1.8M Followers

BIG BREAKING NEWS : ರಾಜ್ಯದಲ್ಲಿ 'ಪದವಿ ಪೂರ್ವ ಕಾಲೇಜು'ಗಳ ಆರಂಭಕ್ಕೆ ಮಾರ್ಗಸೂಚಿ ರಿಲೀಸ್ : ಈ ನಿಯಮಗಳ ಪಾಲನೆ ಕಡ್ಡಾಯ

18 Aug 2021.7:57 PM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ಈಗಾಗಲೇ 9 ಮತ್ತು 10ನೇ ತರಗತಿಗಳನ್ನು ಆಗಸ್ಟ್ 23ರಿಂದ ತೆರೆಯೋದಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು.

ಈ ಬಳಿಕ, ಕೋವಿಡ್-19ರ ಹಿನ್ನಲೆಯಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳ ಆರಂಭಿಸಲು, ಅನುಸರಿಸಬೇಕಾದಂತ ಪ್ರಾಮಾಣಿತ ಕಾರ್ಯಾಚರಣಾ ವಿಧಾನ ( SOP )ಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

SSLC Supplementary Exam 2021 : 'SSLC ಪೂರಕ ಪರೀಕ್ಷೆ' ಕುರಿತಂತೆ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ : ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಹೀಗಿದೆ ಪ್ರಮುಖ ದಿನಾಂಕಗಳು

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಶೈಕ್ಷಣಿಕ ಅವಧಿಯ ಭೌತಿಕ ತರಗತಿಗಳು, ಕೋವಿಡ್-19ರ ವಿಷಮ ಸ್ಥಿತಿಯಿಂದ ಇಲ್ಲಿಯವರೆಗೆ ಪ್ರಾರಂಭವಾಗಿರುವುದಿಲ್ಲ. ಮುಖ್ಯಮಂತ್ರಿಗಳ ಅಧ್ಯಕ್ಷೆಯಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನಿಸಿದಂತೆ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಸೂಕ್ತ ಕ್ರಮವಹಿಸಲು ತಿಳಿಸಲು ವಿವರವಾದ ಮಾರ್ಗಸೂಚಿಗಳನ್ನೊಳಗೊಂಡ ಎಸ್‌ಓಪಿಯನ್ನು ಸಿದ್ಧಪಡಿಸಿದೆ.

'ದ್ವಿತೀಯ PU ವಿದ್ಯಾರ್ಥಿ'ಗಳಿಗೆ ಗುಡ್ ನ್ಯೂಸ್ : ನಾಳೆಯಿಂದ ಆರಂಭಗೊಳ್ಳುತ್ತಿರುವ ಪರೀಕ್ಷೆಗೆ ತೆರಳಲು 'KSRTC ಬಸ್'ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹೀಗಿದೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಮಾರ್ಗಸೂಚಿ ಕ್ರಮಗಳು

ತರಗತಿಗಳನ್ನು ನಡೆಸುವ ವಿಧಾನ

  • ರಾಜ್ಯದಲ್ಲಿ ಪಿಯುಸಿ ತರಗತಿಗಳನ್ನು ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ದಿನಾಂಕ 23-08-2021ರಿಂದ ಪ್ರಾರಂಭಿಸುವುದು.
  • ಪಾಸಿಟಿವಿಟಿ ದರ 2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ಸರ್ಕಾರದ ಮುಂದಿನ ಆದೇಶದಂತೆ ಕ್ರಮವಹಿಸಲು ತಿಳಿಸಲಾಗುವುದು.
  • ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಏಕಕಾಲದಲ್ಲಿ ನಡೆಸುವುದು. ಅದರೇ, ಪ್ರತಿ ತರಗತಿಯ ಪ್ರತಿಶತ 50ರಷ್ಟು ವಿದ್ಯಾರ್ಥಿಗಳು ಮೊದಲ ಮೂರು ದಿನಗಳು ( ಸೋಮವಾರ, ಮಂಗಳವಾರ ಹಾಗೂ ಬುಧವಾರ ) ಭೌತಿಕ ತರಗತಿಗಳಿಗೆ ಹಾಜರಾದರೇ, ಇನ್ನುಳಿದ 50ರಷ್ಟು ವಿದ್ಯಾರ್ಥಿಗಳು ಮನೆಯಲ್ಲೇ ಆನ್ ಲೈನ್ ತರಗತಿಗೆ ಹಾಜರಾಗುವುದು.
  • ಅದೇ ರೀತಿ ಮುಂದಿನ ಮೂರು ದಿನಗಳು ( ಗುರುವಾರ, ಶುಕ್ರವಾರ ಹಾಗೂ ಶನಿವಾರ ) ಆನ್ ಲೈನ್ ತರತಿಗೆ ಹಾಜರಾದ ವಿದ್ಯಾರ್ಥಿಗಳು ಭೌತಿಕ ತರಗತಿಗೆ, ಭೌತಿಕ ತರಗತಿಗೆ ಹಾಜರಾದ ವಿದ್ಯಾರ್ಥಿಗಳು ಆನ್ ಲೈನ್ ತರಗತಿಗೆ ಹಾಜರಾಗಲು ತಿಳಿಸುವುದು.
  • ಹೀಗೆ ಮೊದಲ ಮೂರು ದಿನ ಭೌತಿಕ ತರಗತಿಗೆ, ನಂತ್ರದ ಮೂರು ದಿನ ಆನ್ ಲೌನ್ ತರಗತಿಗೆ ಶೇ.50ರಂತೆ ಹಾಜರಾಗಿ, ನಿರಂತರ ಪಾಠ ಪ್ರವಚನ ಕೇಳಿಕೊಳ್ಳುವಂತೆ ಕ್ರಮವಹಿಸುವುದು.
  • ಯಾವುದೇ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆಯಿದ್ದು, ವಿಶಾಲವಾದ ಕೊಠಡಿಗಳು ಲಭ್ಯವಿದ್ದಲ್ಲಿ, ಎಲ್ಲಾ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಎಲ್ಲಾ ಸರಕ್ಷತಾ ಕ್ರಮಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ನಡೆಸುವುದು. ಅಂದರೆ ವಾರ ಪೂರ್ಣ ಭೌತಿಕ ತರಗತಿಗಳು ನಡೆಯುತ್ತವೆ.
  • ವಿದ್ಯಾರ್ಥಿಗಳ ಹಾಜರಾತಿಯನ್ನು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕಡ್ಡಾಯಗೊಳಿಸುವುದು.
  • ಪ್ರತಿ ತರಗತಿ, ಕೊಠಡಿಯಲ್ಲಿ ನಿಯಮಾನುಸಾರ ಅಂತರ ಕಾಪಾಡಿಕೊಂಡು ಕೊಠಡಿಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿಗದಿ ಪಡಿಸಿಕೊಳ್ಳುವುದು.

ಉಪನ್ಯಾಸಕರು ಮತ್ತು ಕಾಲೇಜಿನ ಸಿಬ್ಬಂದಿಗಳಿಗೆ ಕಡ್ಡಾಯ ಸೂಚನೆ

ಪ್ರಥಮ ಆದ್ಯತೆಯಾಗಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವ್ಯಾಕ್ಸಿನೇಷನ್ ಪಡೆದುಕೊಳ್ಳುದು ಕಡ್ಡಾಯವಾಗಿರುತ್ತದೆ.

ಈ ಸಂಬಂಧ ರಾಜ್ಯದ ಎಲ್ಲಾ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಿಸೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು.

ಸಾಮಾನ್ಯ ನಿಯಂತ್ರಣ ಕ್ರಮಗಳು

  • ವಿದ್ಯಾರ್ಥಿಗಳು ತರಗತಿ ಮತ್ತು ಕಾಲೇಜು ಆವರಣದಲ್ಲಿ ಗುಂಪುಗೂಡಬಾರದು
  • ಕನಿಷ್ಠ 6 ಅಡಿಗಳ ಭೌತಿಕ ಅಂತರದ ನಿಯಮವನ್ನು ಪಾಲಿಸುವುದು.
  • ಮುಖ ಕವಚ, ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವುದು.
  • ಪದೇ ಪದೇ ಕೈಗಳನ್ನು ಸೋಪಿನಿಂದ ತೊಳೆಯುವುದು.
  • ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಮುಖಕ್ಕೆ ಕರವಸ್ತ್ರ, ಟಿಶ್ಯು ಪೇಪರ್ ಬಳಸಬೇಕು.
  • ಎಲ್ಲೆಂದರಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸುವುದು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags