ಕನ್ನಡದುನಿಯಾ

1.6M Followers

ಸರ್ಕಾರಿ ನೌಕರರಿಗೆ ಶಾಕ್: ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ರೆ ವೇತನ ಬಡ್ತಿಗೆ ಬ್ರೇಕ್

20 Aug 2021.05:58 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಜ್ಞಾನ ತಿಳಿದಿಲ್ಲವಾದರೆ ಬಡ್ತಿಗೆ ತಡೆ ಬೀಳಲಿದೆ. ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸಾಗಬೇಕು. ಇಲ್ಲವಾದರೆ ವಾರ್ಷಿಕ ವೇತನ ಬಡ್ತಿಗೆ ತಡೆ ನೀಡಲಾಗುತ್ತದೆ ಎನ್ನಲಾಗಿದೆ.

ರಾಜ್ಯ ಸರ್ಕಾರದಿಂದ ನೇರ ನೇಮಕಾತಿ ಮತ್ತು ಸೇವಾ ನಿರತ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ನೌಕರರು ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಪಡೆದು ಪಾಸಾಗಿರಬೇಕು. 2022ರ ಮಾರ್ಚ್ 22 ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗಬೇಕು. ಫೇಲಾದ ನೌಕರರು ವಾರ್ಷಿಕ ವೇತನ ಬಡ್ತಿ, ಬಡ್ತಿ ಮತ್ತು ಪರಿವೀಕ್ಷಣಾ ಅವಧಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.

ನಿರ್ದಿಷ್ಟಪಡಿಸಲಾದ ಹುದ್ದೆಗಳ ಹೊರತಾಗಿ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಪರೀಕ್ಷೆ ಕಡ್ಡಾಯವಾಗಿದೆ. ಸರ್ಕಾರದ ಅನುಮೋದಿತ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags