TV9 ಕನ್ನಡ

368k Followers

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

10 Aug 2021.2:17 PM

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court) ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ.

ಜನಪ್ರತಿನಿಧಿಗಳು ಅಥವಾ ಪ್ರಭಾವಿಗಳಿಗೆ ಸಂಬಂಧಿಸಿದ ವಿವಾದಿತ ಕೇಸ್​ಗಳನ್ನು ವಿಚಾರಣೆ ಮಾಡುವಾಗ ಆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ಆ ಪ್ರಕರಣದ ತೀರ್ಪಿನ ಮೇಲೆ ಪ್ರಭಾವ ಬೀರುವ ಕೆಲಸ ಘಟನೆಗಳು ನಡೆದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ.

ಹಾಗೇ, ಕ್ರಿಮಿನಲ್ ಕೇಸ್ ದಾಖಲಾಗಿರುವ ಜನಪ್ರತಿನಿಧಿಗಳ ರಾಜ್ಯದ ಹೈಕೋರ್ಟ್​ನ ಒಪ್ಪಿಗೆಯಿಲ್ಲದೆ ಅವರ ವಿರುದ್ಧದ ಕೇಸ್ ಅನ್ನು ಹಿಂಪಡೆಯುವುಂತಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಈ ಕುರಿತು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಅಭ್ಯರ್ಥಿಯಾಗಿ ನೇಮಕವಾದ 48 ಗಂಟೆಯೊಳಗೆ ಜನಪ್ರತಿನಿಧಿಗಳ ಅಪರಾಧ ಜಾತಕ ಸಾರ್ವಜನಿಕಗೊಳಿಸಲೇಬೇಕು: ಸುಪ್ರೀಂ ಕೋರ್ಟ್​

ನಕಲಿ ಟ್ವಿಟರ್ ಖಾತೆ: ಪೊಲೀಸರಿಗೆ ದೂರು ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ

(Criminal cases against MPs MLAs can not be withdrawn without High Court approval Supreme Court orders)

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags