Navayuga News

21k Followers

ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

14 Aug 2021.04:10 AM

ಬೆಂಗಳೂರು, ಆ. 14- ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ ಫಲಿತಾಂಶ ಪ್ರಕಟಿಸಿದ್ದರೂ ಇದರಿಂದ ಬೇಸತ್ತಿರುವ ಕೆಲವು ವಿದ್ಯಾರ್ಥಿಗಳ ಹಿತಾಸಕ್ತಿಯ ಮೇರೆಗೆ ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರೊಳಗೆ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 5546 ಕಾಲೇಜುಗಳಲ್ಲಿರುವ 18414 ವಿದ್ಯಾರ್ಥಿಗಳು ದ್ವಿತೀಯ ಪಿಯಿಸು ಪರೀಕ್ಷೆ ನಡೆಸಬೇಕೆಂದು ಪಟ್ಟು ಹಿಡಿದಿರುವುದರಿಂದ ರಾಜ್ಯದ 187 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಆಗಸ್ಟ್ 17ರೊಳಗೆ ಪೂರ್ವ ಸಿದ್ಧತೆ ಮಾಡಿಕೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗ ಳಿಗೆ ತಿಳಿಸಿದ್ದಾರೆ.

ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಖಾಸಗಿ ವಿದ್ಯಾರ್ಥಿಗಳು ಮತ್ತು ಗ್ರೇಡ್ ನಿಂದ ಅಸಮಾಧಾನಗೊಂಡ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಬಹುದು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Navayuga News

#Hashtags