ಬಿಸಿ ಸುದ್ದಿ

169k Followers

ಸೆ. 1 ರಿಂದ 8 ನೇ ತರಗತಿಯ ಮಕ್ಕಳಿಗೆ ಭೌತಿಕ ತರಗತಿ ಪ್ರಾರಂಭ.!

14 Aug 2021.07:09 AM

ಬೆಂಗಳೂರು: 1 ರಿಂದ 8 ನೇ ತರಗತಿಯ ಮಕ್ಕಳಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

ಈ ಗಾಗಲೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿರುವಂತೆ ರಾಜ್ಯದಲ್ಲಿ 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 23 ರಿಂದ ಭೌತಿಕ ತರಗತಿಗಳು ಆರಂಭವಾಗಲಿವೆ. ಆದರೆ, ಭೌತಿಕ ತರಗತಿ ಆರಂಭವಾದರೂ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಎಂದಿದ್ದಾರೆ.

ಹಾಗೂ 9, 10, 11 ಮತ್ತು 12 ನೇ ತರಗತಿಗಳು ಆರಂಭವಾಗಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯ ಅಭಿಪ್ರಾಯ ಪಡೆದು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಸೆ. 1 ರಿಂದ 8 ನೇ ತರಗತಿಯ ಮಕ್ಕಳಿಗೆ ಭೌತಿಕ ತರಗತಿ ಪ್ರಾರಂಭ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Post navigation

ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ದಿನಾಂಕ ಪ್ರಕಟ.!
Disclaimer

Disclaimer

This story is auto-aggregated by a computer program and has not been created or edited by Dailyhunt Publisher: BC Suddi

#Hashtags