Kannada News Now

1.8M Followers

Independence Day : ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ : ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

14 Aug 2021.1:34 PM

ಬೆಂಗಳೂರು : ವಿದ್ಯಾರ್ಥಿಗಳಿಲ್ಲದೇ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಿವಮೊಗ್ಗ : ಲೋಕ ಅದಾಲತ್ ಮೂಲಕ ತ್ವರಿತ ನ್ಯಾಯ-ಸದುಪಯೋಗಕ್ಕೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಮೂರ್ತಿ ಮುಸ್ತಫಾ ಹುಸೇನ್ ಕರೆ

ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

`ವಾಜಪೇಯಿ ಕುಡಿಯುತ್ತಿದ್ದರಂತೆ, ಹಾಗಂತ ಎಲ್ಲಾ ಬಾರ್ ಗಳಿಗೂ ಹೆಸರಿಡ್ತೀರಾ'? ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ

ಇನ್ನು ಸ್ವಾತಂತ್ರ್ಯ ದಿನಾಚರಣೆ ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ಸ್ವಾತಂತ್ರ್ಯ ಹೋರಾಟದ ಬಗ್ಗೆ ಅರಿಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

BIG NEWS : ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ : `ಝೀರೋ ಟ್ರಾಫಿಕ್' ವ್ಯವಸ್ಥೆ ನೀಡದಂತೆ ಸೂಚನೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags