Kannada News Now

1.8M Followers

Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

09 Sep 2021.06:08 AM

ರಂಜಿತ್ ಶೃಂಗೇರಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Ministry of Defence Recruitment 2021 : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್( NSP) ವಿದ್ಯಾರ್ಥಿ ವೇತನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) 1ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು..

ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು :-

* ವಿದ್ಯಾರ್ಥಿಯ ಆಧಾರ್ ಕಾರ್ಡ್.

* ಪೋಷಕರ ಆಧಾರ್ ಕಾರ್ಡ್.

* ಬ್ಯಾಂಕ್ ಪಾಸ್ ಪುಸ್ತಕ

* ರೇಶನ್ ಕಾರ್ಡ್.

* ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

* ಅಂಕ ಪಟ್ಟಿ / ಮಾರ್ಕ್ಸ್ ಕಾರ್ಡ್

* ಶಾಲಾ ಶುಲ್ಕದ ರಶೀದಿ

* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.

* ಮೊಬೈಲ್ ಸಂಖ್ಯೆ

ಗಣೇಶ ಹಬ್ಬಕ್ಕೆ ರೈತ ಸಮುದಾಯಕ್ಕೆ ಕೇಂದ್ರದಿಂದ ಭರ್ಜರಿ ಸಿಹಿಸುದ್ದಿ : ಹಿಂಗಾರು ಬೆಳೆಗಳ ಕನಿಷ್ಠ ʼಬೆಂಬಲ ಬೆಲೆ ಹೆಚ್ಚಳʼ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

FOR PREMATRIC SCHOLARSHIP : 15 NOVEMBER 2021

FOR POSTMATRIC SCHOLARSHIP : 30 NOVEMBER 2021

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು https://Scholarships.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗು ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ-ಕಾಲೇಜು ಕಛೇರಿ ಸಂಪರ್ಕಿಸಬಹುದಾಗಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags