Kannada News Now

1.8M Followers

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬಿ.ಸಿ.ನಾಗೇಶ್

11 Sep 2021.10:56 AM

ಶಿವಮೊಗ್ಗ : ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶಿಕ್ಷಕರ ವರ್ಗಾವಣೆಗೆ ಕೋರ್ಟ್​ನಿಂದ​​ ತಡೆಯಾಜ್ಞೆ ಇದೆ. ಅವಶ್ಯವಿದ್ದರೆ ಕೋರ್ಟ್ ಮೂಲಕವೇ ತಡೆಯಾಜ್ಞೆ ತೆರವು ಮಾಡಲಾಗುವುದು ಎಂದು ಹೇಳಿದ್ದಾರೆ.

ಕರ್ನಾಲ್​​ನಲ್ಲಿ ಮುಂದುವರೆದ ರೈತರ ಪ್ರತಿಭಟನೆ: ಇಂದು ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಅಪೀಲ್ ಹೋಗುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ತೆರವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಸಿಹಿಸುದ್ದಿ : ಶೀಘ್ರವೇ ಅಡುಗೆ ಎಣ್ಣೆ ದರ ಇಳಿಕೆ!

ಪಠ್ಯ ಕಡಿತ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.‌ ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿ ನಡೆಸಬಹುದಾ ಎಂಬ ಯೋಚನೆ ನಡೆಯುತ್ತಿದೆ. ಯಾವುದೇ ತೀರ್ಮಾನ, ಚರ್ಚೆ ನಡೆದಿಲ್ಲ. ಶಿಕ್ಷಕರ ಸಹಕಾರ ತೆಗೆದುಕೊಂಡು ಮಾಡುವ ಯೋಚನೆ ಇದೆ. ಅವಶ್ಯಕತೆ ಬಿದ್ದರೆ ಪಠ್ಯಕ್ರಮ ಕಡಿಮೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಗುಪ್ತರ ಕಾಲದ 1500 ವರ್ಷ ಹಳೆಯದಾದ ದೇವಾಲಯದ ಅವಶೇಷಗಳನ್ನು ಪತ್ತೆ ಹಚ್ಚಿದ ASI ತಂಡ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags