Kannada News Now

1.8M Followers

BIGG BREAKING NEWS : ಸೆ.6ರಿಂದ 6 ರಿಂದ 8ನೇ ತರಗತಿ ಆರಂಭ, ಸೆ.5ರಂದು ಗಣೇಶ ಹಬ್ಬದ ಅನುಮತಿಗೂ ನಿರ್ಧಾರ - ಸಚಿವ ಆರ್ ಅಶೋಕ್

30 Aug 2021.6:11 PM

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಇರುವಂತ ಪಾಸಿಟಿವಿಟಿ ದರ ಆಧರಿಸಿ, ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

'ರಾಷ್ಟ್ರೀಯ ಶಿಕ್ಷಣ ನೀತಿ' ಬಗ್ಗೆ ಗೊಂದಲ ಬೇಡ : ಇದು ಸಂಪೂರ್ಣ 'ವಿದ್ಯಾರ್ಥಿ ಕೇಂದ್ರಿತ' ಎಂದ ಉನ್ನತ ಶಿಕ್ಷಣ ಸಚಿವರು

ಈ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದಂತ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್.ಅಶೋಕ್ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರಿಂದ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

'ಅನುಕಂಪದ ಆಧಾರದ ಸರ್ಕಾರಿ ನೌಕರಿ' ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 'ಅರ್ಜಿ ಸಲ್ಲಿಕೆ ಅವದಿ ಹೆಚ್ಚಳ'ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸೋದಕ್ಕೆ ಅನುಮತಿ ಇಲ್ಲ ಎಂದರು.

Ganesh Chaturthi 2021 : ಗಣೇಶ ಹಬ್ಬಕ್ಕೆ ಊರಿಗೆ ಹೋಗೋ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : 200ಕ್ಕೂ ಹೆಚ್ಚಿ ವಿಶೇಷ ರೈಲುಗಳ ಸಂಚಾರ

ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವ ಸಂಬಂಧ ಮುಕ್ಕಾಲು ಗಂಟೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿ ನೀಡುವ ಕುರಿತಂತೆ ಮತ್ತೆ ಸೆಪ್ಟೆಂಬರ್ 3ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇರಳದಲ್ಲಿ ಓಣಂ ಸಂದರ್ಭದಲ್ಲಿಯೇ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಗಣೇಶ ಹಬ್ಬಕ್ಕೆ ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿಸೋದಕ್ಕೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಶಿವಮೊಗ್ಗ : ರೋಟರಿ ಶಿವಮೊಗ್ಗ ಪೂರ್ವಕ್ಕೆ ಸೂಪರ್ ಸ್ಟಾರ್ ಪ್ರಶಸ್ತಿ

ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂವನ್ನು ಸಡಿಸಲಾಗಿದೆ. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂ ಮುಂದುವರೆಯಲಿದೆ ಎಂಬುದಾಗಿ ತಿಳಿಸಿದರು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags