Kannada News Now

1.8M Followers

ಸೆ.3 ರಂದು ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ : ಖಾಸಗಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

02 Sep 2021.06:56 AM

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಹಾಗೂ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆಯ ವಾರ್ಡ್ ಸಂಖ್ಯೆ 4 ಹಾಗೂ 23 ರ ಉಪಚುನಾವಣೆ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ.

ಸದರಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ಆಯಾ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಇದೇ ಸೆಪ್ಟೆಂಬರ್ 3ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಈ ಸಾರ್ವತ್ರಿಕ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣೆ ನಡೆಯುವ ವಾರ್ಡ್‍ಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಇದೇ ಸೆಪ್ಟೆಂಬರ್ 3 ರಂದು ಕರ್ನಾಟಕ ಪುರಸಭೆ (ಕೌನ್ಸಿಲರ್‍ಗಳ ಚುನಾವಣೆ) ನಿಯಮಗಳು 1977ರ ನಿಯಮ 64 ಝಡ್.ಡಿ. ಮತ್ತು ಕರ್ನಾಟಕ ಪೌರ ನಿಯಮಗಳ (ಚುನಾವಣೆ) ನಿಯಮಗಳು 1979ರ ನಿಯಮ 70 ಎಕ್ಸ್.ಎಫ್. ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆಯನ್ನು ನೀಡಲು ಸರ್ಕಾರ ಆದೇಶಿಸಿದೆ. ಈ ಆದೇಶವು ಸೆಕ್ಷನ್ 25 ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಯಕ್ಟ್ 1881ರಡಿ ಬರುವ ಎಲ್ಲಾ ಸಂಸ್ಥೆಗಳಿಗೆ ಸಹ ಅನ್ವಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags