Kannada News Now

1.8M Followers

Good News : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ `ಅತಿಥಿ ಶಿಕ್ಷಕರ' ನೇಮಕಾತಿಗಾಗಿ ಅರ್ಜಿ ಆಹ್ವಾನ

03 Sep 2021.06:08 AM

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ 4 ಸಾವಿರ ಕಾನ್ ಸ್ಟೇಬಲ್ ಹುದ್ದೆಗಳ ನೇಮಕ

ಅಭ್ಯರ್ಥಿಗಳು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಕನಿಷ್ಠ ಎರಡು ವರ್ಷದ ಅನುಭವ ಹೊಂದಿರುವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 9 ರೊಳಗಾಗಿ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ, ಚಿತ್ತಾಪೂರ, ಆಳಂದ, ಸೇಡಂ, ಹಾಗೂ ಜೇವರ್ಗಿ ತಾಲೂಕುಗಳಲ್ಲಿನ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಉದ್ಯೋಗಿನಿ ಯೋಜನೆ : ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್

ಕನ್ನಡ ವಿಷಯದ 1 ಹುದ್ದೆ, ಇಂಗ್ಲೀಷ ವಿಷಯದ 7 ಹುದ್ದೆ ಹಾಗೂ ಸಮಾಜ ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎ. ಬಿ.ಇಡಿ ಪಾಸಾಗಿರಬೇಕು. ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ. (ಸಿ.ಬಿ.ಝಡ್.) ಹಾಗೂ ಗಣಿತ ವಿಷಯದ 3 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ (ಪಿ.ಸಿ.ಎಂ.) ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

`LIC' ಯ ಈ ಯೋಜನೆಯಲ್ಲಿ ಪ್ರತಿದಿನ 200 ರೂ.ಗಳನ್ನು ಹೂಡಿಕೆ ಮಾಡಿ, ಮೆಚ್ಯೂರಿಟಿ ಮೇಲೆ 28 ಲಕ್ಷ ರೂ.ಗಳನ್ನು ಪಡೆಯಬಹುದು!

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರ-(ಮೊಬೈಲ್ ಸಂಖ್ಯೆ 7899755427), ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ (ಮೊಬೈಲ್ ಸಂಖ್ಯೆ 9535775141), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಆಳಂದ (ಮೊಬೈಲ್ ಸಂಖ್ಯೆ 8147775722), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಸೇಡಂ (ಮೊಬೈಲ್ ಸಂಖ್ಯೆ 7892369798), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಚಿತ್ತಾಪೂರ (ಮೊಬೈಲ್ ಸಂಖ್ಯೆ 9741168681) ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ 08472-247260 ಗೆ ಸಂಪರ್ಕಿಸಲು ಕೋರಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags