Kannada News Now

1.8M Followers

weather Update : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

03 Sep 2021.06:41 AM

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Extension of visa period : ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳ ವೀಸಾ ಅವಧಿ ಸೆ.30 ರವರೆಗೆ ವಿಸ್ತರಣೆ : ಕೇಂದ್ರ ಸರ್ಕಾರ ಆದೇಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ.

Police Sub Inspector Exam : ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags