Kannada News Now

1.8M Followers

Good News : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ 1,801 ಸಹ ಶಿಕ್ಷಕರ ನೇಮಕ

17 Sep 2021.05:59 AM

ಬೆಂಗಳೂರು : ಇತ್ತೀಚಿಗೆ ನಡೆದಂತ 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಈ ಫಲಿತಾಂಶದಲ್ಲಿ ಶೇ.19ರಷ್ಟು ಅಭ್ಯರ್ಥಿಗಳು ಮಾತ್ರವೇ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು. ಇದೀಗ ಈ ಅಭ್ಯರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಹೊರ ಬಿದ್ದಿದ್ದು, ಶೀಘ್ರವೇ 1,801 ಸಹ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

Corona Vaccine : ಇದುವರೆಗೆ ಭಾರತದಲ್ಲಿ ಮೊದಲ ಡೋಸ್, 2ನೇ ಡೋಸ್ ಲಸಿಕೆ ಪಡೆದವರೆಷ್ಟು ಗೊತ್ತಾ.?

ಈ ಕುರಿತಂತೆ ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಟಿ.ಎನ್.ಬಾಲಕೃಷ್ಣ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ 3,590 ಪ್ರೌಢಶಾಲೆಗಳ ಸಹ ಶಿಕ್ಷಕರ ಹುದ್ದೆ ಖಾಲಿ ಇದ್ದಾವೆ ಎಂದರು.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಮೇಲೆ ಬಿಸಿ ಬಿಸಿ ಚರ್ಚೆ : ಸದನದಲ್ಲಿ ಸಿಡಿದೆದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಇನ್ನೂ ಮುಂದುವರೆದು ಮಾತನಾಡಿದಂತ ಅವರು, 1,801 ಸಹ ಶಿಕ್ಷಕರ ಹುದ್ದೆಯ ಭರ್ತಿಗಾಗಿ ಹಣಕಾಸು ಇಲಾಖೆಯ ಅನುಮತಿಗೆ ಕಳುಹಿಸಲಾಗುತ್ತದೆ. ಹಣಕಾಸು ಇಲಾಖೆಯ ಅನುಮತಿ ನಂತ್ರ ಶೀಘ್ರವೇ ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇರುವಂತ 1,801 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗುತ್ತದೆ ಎಂದರು.

ಕುವೆಂಪು ವಿವಿ 31ನೇ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ

ಸದ್ಯಕ್ಕೆ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 47 ಸರ್ಕಾರಿ ಪ್ರೌಢ ಶಾಲೆಗಳಲ್ಲಿ 51 ಆಂಗ್ಲ ಶಿಕ್ಷಕರ ಹುದ್ದೆ ಮಂಜೂರಾಗಿವೆ. 11 ಹುದ್ದೆಗಳು ಖಾಲಿ ಇವೆ. ಇವುಗಳಿಗೂ ಸದ್ಯಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುತ್ತದೆ ಎಂದರು.

ಉತ್ತರ ಪ್ರದೇಶದಲ್ಲಿ ಮಹಾಮಳೆಯ ಅವಾಂತರ : 7 ಜನರು ಸಾವು, ಶಾಲೆಗಳು ಬಂದ್, ವಿದ್ಯುತ್ ವ್ಯತ್ಯಯ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags