Kannada News Now

1.8M Followers

'ಅನುಕಂಪದ ಆಧಾರದ ಸರ್ಕಾರಿ ನೌಕರಿ' ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

18 Sep 2021.06:17 AM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕದ ಕಾರಣ ವಿಧಿಸಿದ ಲಾಕ್ ಡೌನ್ ಹಿನ್ನಲೆಯಲ್ಲಿ ಪರೀಕ್ಷಾ ಫಲಿತಾಂಶಗಳು ವಿಳಂಬವಾದ ಪ್ರಕರಣಗಳಲ್ಲಿ, ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿದಾರರ ವಿದ್ಯಾರ್ಹತೆಯನ್ನು ಪರಿಗಣಿಸುವಂತೆ ಸರ್ಕಾರ ಆದೇಶಿಸಿದೆ.

ಈ ಮೂಲಕ ಅನುಕಂಪದ ಆಧಾರದ ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.

Traffic Violations : ಹೀಗಿದೆ 'ಸಂಚಾರ ನಿಯಮ ಉಲ್ಲಂಘನೆ' ಹಾಗೂ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವಂತ ದಂಡದ ವಿವರಗಳು.!

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ.ಎನ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸಿವಿಲ್ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 4 (3) ಮತ್ತು 4 (4)ರಲ್ಲಿ ನೇಮಕಾತಿಗಾಗಿ ಅಗತ್ಯ ವಿದ್ಯಾರ್ಹತೆ ಬಗ್ಗೆ ತಿಳಿಸಲಾಗಿದೆ.

ಮದ್ಯದಂಗಡಿಗಳ ಮುಂದೆ ಖರೀದಿಗಾಗಿ ಸಾಲು ನಿಂತವರನ್ನು ಕೀಳಾಗಿ ಕಾಣಬಾರದು - ಕೇರಳ ಹೈಕೋರ್ಟ್

ಅದರ ಅನುಸಾರ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿದ್ದಲ್ಲಿ ಅಥವಾ ಹೊಂದೇ ದ್ದಲ್ಲಿಯೂ ಸಹ ಗ್ರೂಪ್ ಡಿ ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪದವಿ ಪೂರ್ವ (ಪಿಯುಸಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದಲ್ಲಿ ಗ್ರೂಪ್ ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ, ಕಿರಿಯ ಸಹಾಯಕ ಹುದ್ದೆಗೆ ನೇಮಕ ಮಾಡಬಹುದಾಗಿದೆ.

Gold Price Today : ಆಭವರಣ ಖರೀದಿದಾರರಿಗೆ ಗುಡ್ ನ್ಯೂಸ್ : ಚಿನ್ನದ ದರದಲ್ಲಿ ಮತ್ತೆ ಭಾರಿ ಇಳಿಕೆ

ಕೋವಿಡ್-19ರ ಸಾಂಕ್ರಾಮಿಕದ ಪ್ರಯುಕ್ತ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ ಕಾರಣ 2019-20ನೇ ಸಾಲಿನಲ್ಲಿ ಪದವಿ ಪೂರ್ವ ( ಪಿಯುಸಿ ) ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿರುತ್ತದೆ.

ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬೆಂಗಳೂರಿನಲ್ಲಿ ಬಲಿ

ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, 1996ರ ನಿಯಮಗಳನ್ವಯ ಆತನ ಅವಲಂಬಿತರದಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ್ದ ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ವ್ಯಕ್ತಿಯ ಪದವಿ ಪೂರ್ವ ( ಪಿಯುಸಿ ) ಪರೀಕ್ಷಾ ಫಲಿತಾಂಶ ಪ್ರಕಟಣೆಯು 2019-20ನೇ ಸಾಲಿನಲ್ಲಿ ವಿಳಂಬವಾಗಿ ಪ್ರಕಟಗೊಂಡ ಪದವಿ ಪೂರ್ವ ( ಪಿಯುಸಿ) ಪರೀಕ್ಷಾ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು, ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರ, ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags