ಪ್ರಜಾವಾಣಿ

1.5M Followers

Northern Railways: SSLC, ITI ಪಾಸು; 3093 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

18 Sep 2021.1:46 PM

ನವದೆಹಲಿ: ನಾರ್ತ್‌ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3093 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ.

ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ: 3093

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://www.rrcnr.org/ ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 20, ಅಕ್ಟೋಬರ್ 2021

ವೆಬ್‌ಸೈಟ್‌: http://www.rrcnr.org

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Prajavani

#Hashtags